ವಿದ್ಯಾರ್ಥಿಗಳ ಆಸಕ್ತಿಗೆ ಪೂರಕವಾದ ವಿಷಯದ ಬಗ್ಗೆ ಶಿಕ್ಷಣ ನೀಡುವುದೇ ನಿಜವಾದ ಶಿಕ್ಷಣ : ಶಾಸಕಿ ಭಾಗೀರಥಿ ಮುರುಳ್ಯ

ವಿದ್ಯಾರ್ಥಿಗಳ ಆಸಕ್ತಿಗೆ ಪೂರಕವಾದ ವಿಷಯದ ಬಗ್ಗೆ ಶಿಕ್ಷಣ ನೀಡುವುದೇ ನಿಜವಾದ ಶಿಕ್ಷಣ ಎಂದು ಶಾಸಕಿ ಭಾಗೀರಥಿ ಮುರುಳ್ಯ ಅಭಿಪ್ತಾಯಪಟ್ಟರು.
ಶಾಲಾ ಶಿಕ್ಷಣ ಇಲಾಖೆ,ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್,ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಶ್ರೀ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಪದನಿಮಿತ್ತ ತಾಲೂಕು ಯೋಜನಾಧಿಕಾರಿಯವರ ಕಚೇರಿ ಸುಳ್ಯ ತಾಲೂಕು,ಸುಳ್ಯ ತಾಲೂಕು ಶಿಕ್ಷಕರ ದಿನಾಚರಣೆ ಯ ಸಮಿತಿ ಇದರ ಆಶ್ರಯದಲ್ಲಿ ಸುಳ್ಯ ಜೂನಿಯರ್ ಕಾಲೇಜು‌ ಸಭಾಭವನದಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಿಕ್ಷಕ ಪಠ್ಯವನ್ನು ಹೊರತುಪಡಿಸಿ ಇತರ ವಿಷಯ ಶಿಕ್ಷಣ ನೀಡಬೇಕು.ಮಕ್ಕಳನ್ನು ಭವ್ಯ ಭಾರತದ ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಕೆಲಸವನ್ನು ಶಿಕ್ಷಕರು ಮಾಡುತ್ತಿದ್ದಾರೆ.
ರಾಜ್ಯ ಕನಿಷ್ಠ ವೇತನ ಸಮಿತಿ ಅಧ್ಯಕ್ಷ ಟಿ.ಎಂ.ಶಹೀದ್,ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ,ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ,ತಾಲೂಕು ಪಂಚಾಯತ್ ಇ.ಒ‌ ರಾಜಣ್ಣ,ತಹಶೀಲ್ದಾರ್ ಮಂಜುಳ,ಸೂಡ ಅಧ್ಯಕ್ಷ ಮುಸ್ತಾಪ,ಡಾ.ಕೆ.ವಿ ಚಿದಾನಂದ,ಮಾಧವ ಭಟ್,ಶೀತಲ್ ಯು‌.ಕೆ, ಚಂದ್ರಶೇಖರ ಪೇರಾಲ್ , ಸುಜಯ,ವೀಣಾ,ಮೋಹನ್ ಎಣ್ಮೂರು,ಸುನೀಲ್, ಉದಯಕುಮಾರ್ ರೈ,ಧನಂಜಯ ಎ.ಎಂ ಇತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಎಸ್ ಹರಗಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.
ನಿವೃತ್ತ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರನ್ನು ಸನ್ಮಾನಿಸಲಾಯಿತು.

































Leave a Comment

Your email address will not be published. Required fields are marked *

error: Content is protected !!
Scroll to Top