ಗ್ರಾಮಾಭಿವೃದ್ಧಿ ಯೋಜನೆಯ ಬೆಳವಣಿಗೆಗೆ ಇನ್ನಷ್ಟು ಪ್ರಯತ್ನ ಮಾಡೋಣ: ಬಾಬು ನಾಯ್ಕ

ಅರಂತೋಡು, ಸೆ. 13: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಇಂದು ಬಡವರ ಪಾಲಿಗೆ ವರದಾನವಾಗಿದ್ದು, ಯೋಜನೆಯ ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬೆಳೆಸಲು ಎಲ್ಲರೂ ಒಗ್ಗಟ್ಟಿನಿಂದ ಪ್ರಯತ್ನಿಸಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದಕ್ಷಿಣ ಕನ್ನಡ ಜಿಲ್ಲೆಯ ನಿರ್ದೇಶಕ ಬಾಬು ನಾಯ್ಕ ಹೇಳಿದರು.
ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಸುಳ್ಯ ತಾಲೂಕು ಹಾಗೂ ಸಂಪಾಜೆ ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ, ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗಡೆಯವರ ಮಾರ್ಗದರ್ಶನದಲ್ಲಿ ಸೆ. 13ರಂದು ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆದ ಅರಂತೋಡು, ತೊಡಿಕಾನ, ಅರಂಬೂರು ಹಾಗೂ ಮರ್ಕಂಜ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪದಾಧಿಕಾರಿಗಳಿಗೆ ಜವಾಬ್ದಾರಿ ಹಸ್ತಾಂತರಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಪಾಜೆ ವಲಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ವಲಯಾಧ್ಯಕ್ಷ ಹೂವಯ್ಯ ಗೌಡ ವಹಿಸಿದ್ದರು. ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರ ಯೋಗೇಶ್ವರ ಸಿದ್ಧ ಮಠ, ಮರ್ಕಂಜದ ಶ್ರೀ ರಾಜೇಶನಾಥ್ ಜಿ. ಅವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲೆಯ ನಿರ್ದೇಶಕ ಬಾಬು ನಾಯ್ಕ ಅವರು ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿ ಹಸ್ತಾಂತರಿಸಿದರು.
ಕಾರ್ಯಕ್ರಮದಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸಮಿತಿ ಸುಳ್ಯ ತಾಲೂಕು ಅಧ್ಯಕ್ಷ ಸೋಮಶೇಖರ ಪೈಕ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ಘಟಕದ ಅಧ್ಯಕ್ಷ ವೆಂಕಪ್ಪ ಗೌಡ, ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುಟ್ಟಮೊಟ್ಟೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು ನಿಕಟಪೂರ್ವ ಅಧ್ಯಕ್ಷ ಭವಾನಿ ಶಂಕರ ಅಡ್ತಲೆ, ಅರಂತೋಡು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕೇಶವ ಅಡ್ತಲೆ, ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಲೋಕನಾಥ್ ಅಮೆಚೂರು, ಸತೀಶ್ ರಾವ್ ದಾಸರಬೈಲು, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸಂಪಾಜೆ ವಲಯ ಅಧ್ಯಕ್ಷೆ ಭಾರತಿ ಉಳುವಾರು, ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ, ಜಗನ್ನಾಥ ಕಾಯರ, ರತ್ನಾವತಿ ಅಳಿಕೆ, ಚಂದ್ರಶೇಖರ ನೆಡ್ಚಿಲು, ಜನಾರ್ದನ ಬಾಳೆಕಜೆ, ಗೋಪಾಲಕೃಷ್ಣ ಬಿ.ಕೆ., ರಾಧಾಕೃಷ್ಣ ಕೆ. ಅಂಗಡಿ ಮಜಲು ಹಾಗೂ ಪ್ರಗತಿ ಬಂಧು ಒಕ್ಕೂಟದ ಅಧ್ಯಕ್ಷೆ ಲೀಲಾವತಿ ಸೂಟಗದ್ದೆ ಉಪಸ್ಥಿತರಿದ್ದರು.
ಅರಂತೋಡಿನಲ್ಲಿ ನಡೆದ ಮದ್ಯವರ್ಜನ ಶಿಬಿರದ ಪದಾಧಿಕಾರಿಗಳನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಅರಂಬೂರು ಒಕ್ಕೂಟದ ಅಶೋಕ ಪೀಚೆ ತಂಡ,ತೊಡಿಕಾನ ಒಕ್ಕೂಟದ ವೆಂಕಟ್ರಮಣ ಪೆತ್ತಾಜೆ ತಂಡ,ಅರಂತೋಡು ಒಕ್ಕೂಟದ ಪ್ರಸನ್ನ ತಂಡ,ಮಿತ್ತಡ್ಕ ಒಕ್ಕೂಟದವರು ಜವಾಬ್ದಾರಿ ವಹಿಸಿಕೊಂಡರು.











































ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸಂಪಾಜೆ ವಲಯದ ವತಿಯಿಂದ ಬೆಳಿಗ್ಗೆ 8 ಗಂಟೆಯಿಂದ ಭಜನಾ ಕಾರ್ಯಕ್ರಮ ನಡೆಯಿತು.
ಮೇಲ್ವಿಚಾರಕ ಹರೀಶ್ ಆಚಾರ್ಯ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಷ್ಮಾ ಪಾರೆಪ್ಪಾಡಿ ಹಾಗೂ ದೇವಪ್ಪ ಹೈದಂಗೂರು ಕಾರ್ಯಕ್ರಮ ನಿರೂಪಿಸಿದರು.

Leave a Comment

Your email address will not be published. Required fields are marked *

error: Content is protected !!
Scroll to Top