ಅರಂತೋಡು: ಪ್ರಗತಿ ಬಂಧು ಸ್ವಸಹಾಯ ಸಂಘಗಳು ಸದಸ್ಯರ ಸ್ವಾವಲಂಬಿ ಬದುಕಿಗೆ ಮಾತ್ರವಲ್ಲದೆ ಅವರ ವ್ಯಕ್ತಿತ್ವ ವಿಕಸನಕ್ಕೂ ಪೂರಕವಾಗಿವೆ ಎಂದು ಶಾಸಕಿ ಕು. ಭಾಗೀರಥಿ ಮುರುಳ್ಯ ಹೇಳಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಸುಳ್ಯ ತಾಲೂಕು ಹಾಗೂ ಸಂಪಾಜೆ ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ, ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಸೆ. 13ರಂದು ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆದ ಅರಂತೋಡು, ತೊಡಿಕಾನ, ಅರಂಬೂರು ಹಾಗೂ ಮರ್ಕಂಜ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲೆಯ ನಿರ್ದೇಶಕ ಬಾಬು ನಾಯ್ಕ ಮಾತನಾಡಿ, “ಪ್ರಗತಿ ಬಂಧು ಸ್ಬಸಹಾಯ ಸಂಘ ಬಡವರ ಪಾಲಿಗೆ ಬೆಳಕಾಗಿದೆ. ಗ್ರಾಮಾಭಿವೃದ್ಧಿ ಯೋಜನೆಯನ್ನು ಇನ್ನಷ್ಟು ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ಪ್ರಯತ್ನಿಸೋಣ” ಎಂದು ಕರೆ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಸಂಪಾಜೆ ವಲಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಹೂವಯ್ಯ ಗೌಡ ವಹಿಸಿದ್ದರು. ಕಾರ್ಯಕ್ರಮವನ್ನು ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರ ಯೋಗೇಶ್ವರ ಸಿದ್ಧಮಠ, ಮರ್ಕಂಜದ ಶ್ರೀ ರಾಜೇಶನಾಥ್ ಜಿ. ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಗ್ರಾಮಾಭಿವೃದ್ಧಿ ಯೋಜನೆಯು ಕರ್ನಾಟಕದ ಉದ್ದಗಲಕ್ಕೂ ಬೆಳೆದು ಇದೀಗ ಕೇರಳ ರಾಜ್ಯಕ್ಕೂ ಕಾಲಿಟ್ಟಿರುವುದು ಹೆಮ್ಮೆಯ ಸಂಗತಿ. ಯೋಜನೆಯು ಇನ್ನಷ್ಟು ರಾಜ್ಯಗಳಿಗೆ ವಿಸ್ತರಣೆಯಾಗಲಿ ಎಂದು ಶುಭ ಹಾರೈಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉದ್ಯಮಿ ಡಿ.ವಿ. ಸತೀಶ್ ಅವರು ವಿವಿಧ ಯಶಸ್ವಿ ಉದ್ಯಮಗಳು ಹಾಗೂ ಕೃಷಿ ಚಟುವಟಿಕೆಗಳ ಉದಾಹರಣೆಗಳನ್ನು ನೀಡುವ ಮೂಲಕ ಸದಸ್ಯರಿಗೆ ಪ್ರೇರಣೆ ನೀಡಿದರು.
ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಾಹೀದ್, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸಮಿತಿ ಸುಳ್ಯ ತಾಲೂಕು ಅಧ್ಯಕ್ಷ ಸೋಮಶೇಖರ ಪೈಕ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ಘಟಕದ ಅಧ್ಯಕ್ಷ ವೆಂಕಪ್ಪ ಗೌಡ, ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ ಮೊಟ್ಟೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು ನಿಕಟಪೂರ್ವ ಅಧ್ಯಕ್ಷ ಭವಾನಿ ಶಂಕರ ಅಡ್ತಲೆ ಮಾತನಾಡಿದರು.
ವೇದಿಕೆಯಲ್ಲಿ ಅರಂತೋಡು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕೇಶವ ಅಡ್ತಲೆ, ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಲೋಕನಾಥ್ ಅಮೆಚೂರು, ಸತೀಶ್ ರಾವ್ ದಾಸರಬೈಲು, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸಂಪಾಜೆ ವಲಯ ಅಧ್ಯಕ್ಷೆ ಭಾರತಿ ಉಳುವಾರು, ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ, ಜಗನ್ನಾಥ ಕಾಯರ, ರತ್ನಾವತಿ ಅಲಿಕೆ, ಚಂದ್ರಶೇಖರ ನೆಡ್ಚಿಲು, ಜನಾರ್ದನ ಬಾಳೆಕಜೆ, ಗೋಪಾಲಕೃಷ್ಣ ಬಿ.ಕೆ., ರಾಧಾಕೃಷ್ಣ ಕೆ. ಅಂಗಡಿಮಜಲು ಹಾಗೂ ಪ್ರಗತಿ ಬಂಧು ಒಕ್ಕೂಟದ ಅಧ್ಯಕ್ಷೆ ಲೀಲಾವತಿ ಸೂಟಗದ್ದೆ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಉತ್ತಮ ಸಾಧನೆ ಮಾಡಿದ ಸಂಘಗಳನ್ನು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ಕಾರ್ಯಕ್ರಮಗಳಿಗೆ ಸಹಕಾರ ನೀಡಿದ ಗಣ್ಯರಾದ ಭವಾನಿ ಶಂಕರ ಅಡ್ತಲೆ, ಸಂತೋಷ್ ಕುತ್ತಮಟ್ಟೆ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಸುರೇಶ್ ಉಳುವಾರು, ಜತ್ತಪ್ಪ ಮಾಸ್ಟರ್ ಅಳಿಕೆ, 10 ಮಂದಿ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಮಂಜೂರಾತಿ ಪತ್ರ ವಿತರಣೆ ಮಾಡಲಾಯಿತು. ಸಂಪೂರ್ಣ ಸುರಕ್ಷಾದಲ್ಲಿ ಮನಮೋಹನವರಿಗೆ ಸಂಪೂರ್ಣ ಸುರಕ್ಷಾ ರೂ 72,000/- ಮಂಜುರಾತಿ ಪತ್ರವನ್ನು ವಿತರಿಸಲಾಯಿತು. ವಲಯದ ಮೇಲ್ವಿಚಾರಕರಾದ ಹರೀಶ್ ಆಚಾರ್ಯ ರವರು ಸ್ವಾಗತಿಸಿದರು. ಸುಷ್ಮಾ ಮೆತ್ತಡ್ಕ , ದೇವಪ್ಪ ಹೈದಂಗೂರು ನಿರೂಪಿಸಿದರು.
ಚಂದ್ರಶೇಖರ ಆಚಾರ್ಯ ರವರು ವಂದಿಸಿದರು. ತೊಡಿಕಾನ ಸೇವಾ ಪ್ರತಿನಿಧಿ ಸುಂದರರವರು ವರದಿ ವಚಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

























