ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದಲ್ಲಿ ಶ್ರದ್ಧಾ ಭಕ್ತಿಯ ಗಣೇಶ ಚತುರ್ಥಿ ಆಚರಣೆ

ತೊಡಿಕಾನ: ಸುಳ್ಯ ಸೀಮೆಯ ಪ್ರಸಿದ್ಧ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಭ್ರಮದಿಂದ ನಡೆಯಿತು.
ಗಣೇಶ ಚತುರ್ಥಿಯ ಅಂಗವಾಗಿ ದೇವಳದಲ್ಲಿ 108 ತೆಂಗಿನಕಾಯಿಗಳ ಗಣಹೋಮ ಭಕ್ತಿಭಾವದಿಂದ ನೆರವೇರಿತು. ಗಣಹೋಮದ ಬಳಿಕ ಮಹಾಪೂಜೆ ನಡೆಯಿತು. ಭಕ್ತರಿಗೆ ಪ್ರಸಾದ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಮಕ್ಕಳಿಗೆ ಅನ್ನಪ್ರಾಶನ ಕದಿರು ವಿತರಣೆ ಕಾರ್ಯಕ್ರಮವೂ ನಡೆಯಿತು.
ಗಣೇಶ ಚತುರ್ಥಿಯ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡುವಂತೆ ತೊಡಿಕಾನ ಭಜನಾ ಸಂಘದ ವತಿಯಿಂದ ಸಾರ್ವಜನಿಕರಿಗೆ ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಮಕ್ಕಳು, ಯುವಕರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮದ ಸಂಭ್ರಮವನ್ನು ಹೆಚ್ಚಿಸಿದರು.
ಧಾರ್ಮಿಕ ಆಚರಣೆಗಳೊಂದಿಗೆ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳು ಬೆರೆತು, ದೇವಳದ ಪರಿಸರದಲ್ಲಿ ಹಬ್ಬದ ಸಡಗರ ಮನೆಮಾಡಿತ್ತು. ಸೀಮೆಯ ವಿವಿಧೆಡೆಗಳಿಂದ ಆಗಮಿಸಿದ ಭಕ್ತರು ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.
ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು, ಮಾಜಿ ಅಧ್ಯಕ್ಷರು ಮತ್ತು ಸದಸ್ಯರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು, ದೇವಳದ ಸಿಬ್ಬಂದಿಗಳು ಹಾಗೂ ಸೀಮೆಯ ಭಕ್ತರು ಉಪಸ್ಥಿತರಿದ್ದರು.











































Leave a Comment

Your email address will not be published. Required fields are marked *

error: Content is protected !!
Scroll to Top