ಅರಂತೋಡು: ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ ಹಾಗೂ ರಾಷ್ಟ್ರ ಸಮರ್ಪಿತ ಜನಸೇವೆಯ ಸಾರ್ಥಕ 25 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ಸೇವಾ ಸಂಕಲ್ಪದ ಅಂಗವಾಗಿ ಅರಂತೋಡು ಶ್ರೀ ದುರ್ಗಾ ಮಾತಾ ಭಜನಾ ಮಂದಿರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಮೋದಿಜಿ ಅವರಿಗೆ ದೀರ್ಘಾಯುಷ್ಯ, ಉತ್ತಮ ಆರೋಗ್ಯ ಹಾಗೂ ದೇಶಕ್ಕೆ ಉತ್ತಮ ಆಡಳಿತ ನೀಡಲು ಅಗತ್ಯವಾದ ಶಕ್ತಿ ಮತ್ತು ಚೈತನ್ಯ ಪ್ರಾಪ್ತಿಯಾಗಲಿ ಎಂದು ಪ್ರಾರ್ಥಿಸಲಾಯಿತು. ಅಲ್ಲದೆ, 2047ರ ವೇಳೆಗೆ ಭಾರತವನ್ನು ವಿಕಸಿತ ರಾಷ್ಟ್ರವನ್ನಾಗಿಸುವ ಸಂಕಲ್ಪ ಸಾಕಾರಗೊಳ್ಳಲಿ ಎಂದು ಆಶಯ ವ್ಯಕ್ತಪಡಿಸಲಾಯಿತು.
ಈ ಸಂದರ್ಭದಲ್ಲಿ ‘ಆಶೀರ್ವಾದದ ದೀಪ’ ಬೆಳಗಿಸಲಾಯಿತು. ಬಳಿಕ ಸಂಘದ ಶಾಖೆ ನಡೆಯಿತು. ಕಾರ್ಯಕ್ರಮದಲ್ಲಿ ಅರಂತೋಡು ಶಕ್ತಿ ಕೇಂದ್ರದ ಬಿಜೆಪಿ ಪ್ರಮುಖರು, ಪರಿವಾರ ಸಂಘಟನೆಯ ಕಾರ್ಯಕರ್ತರು ಹಾಗೂ ಗ್ರಾಮದ ಗಣ್ಯರು ಭಾಗವಹಿಸಿದ್ದರು.
ಕಾರ್ಯಕ್ರಮದ ಕೊನೆಯಲ್ಲಿ ಸಿಹಿತಿಂಡಿ ವಿತರಿಸಲಾಯಿತು.
ಮೋದಿಯವರ ಹುಟ್ಟುಹಬ್ಬ: ಅರಂತೋಡಿನಲ್ಲಿ ‘ಆಶೀರ್ವಾದದ ದೀಪ’ ಬೆಳಗಿಸಿ ಪ್ರಾರ್ಥನೆ

























