ಕಾರ್ಕಳ, ಸೆ.20: ಮಾಜಿ ಸಚಿವ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ರಮಾನಾಥ ರೈ ಸೇರಿದಂತೆ ಕೆಲವರು ಗಾಯಗೊಂಡ ಘಟನೆ ಕಾರ್ಕಳ–ಮೂಡುಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್ ಬಳಿ ಭಾನುವಾರ ನಡೆದಿದೆ.
ಮಾಹಿತಿಯಂತೆ, ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಸಾಣೂರು ಜಂಕ್ಷನ್ ಸಮೀಪ ಸಾಗುತ್ತಿದ್ದ ವೇಳೆ ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದ್ದು, ಕಾರಿನಲ್ಲಿದ್ದ ರಮಾನಾಥ ರೈ ಸೇರಿದಂತೆ ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಕಾರ್ಕಳ: ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್ ಡಿಕ್ಕಿ

























