ಕಸ್ತೂರಿರಂಗನ್ ವರದಿ ವಿರೋಧಿಸಿ ಅರಂತೋಡಿನಲ್ಲಿ ಬೃಹತ್ ಪ್ರತಿಭಟನೆ

ಅರಂತೋಡು, ಸೆ. 22: ಕಸ್ತೂರಿರಂಗನ್ ವರದಿ ಹಾಗೂ 7ನೇ ಕರಡು ಅಧಿಸೂಚನೆಯಡಿ ಪರಿಸರ ಸೂಕ್ಷ್ಮ ವಲಯ (ESA) ಘೋಷಣೆ ವಿರೋಧಿಸಿ ಅರಂತೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಂತೋಡು ಮತ್ತು ತೊಡಿಕಾನ ಗ್ರಾಮಸ್ಥರು ಮಂಗಳವಾರ ಗ್ರಾಮ ಪಂಚಾಯಿತಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿದರು. ಬಳಿಕ ಪಂಚಾಯತ್ ಆಡಳಿತಾಧಿಕಾರಿ ಮೂಲಕ ಸರಕಾರಕ್ಕೆ ಆಕ್ಷೇಪಣಾ ಮನವಿ ಸಲ್ಲಿಸಿದರು.
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕ ಕಿಶೋರ್ ಶಿರಾಡಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕಿಶೋರ್ ಶಿರಾಡಿ, ಪಶ್ಚಿಮ ಘಟ್ಟಗಳ ಗಡಿಯನ್ನು ವೈಜ್ಞಾನಿಕವಾಗಿ ಹಾಗೂ ಸ್ಪಷ್ಟವಾಗಿ ಗುರುತಿಸಿ, ಕೃಷಿಭೂಮಿ ಮತ್ತು ಜನವಸತಿ ಪ್ರದೇಶಗಳಿಗೆ ಅನಗತ್ಯ ನಿರ್ಬಂಧಗಳು ಉಂಟಾಗದಂತೆ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕಸ್ತೂರಿರಂಗನ್ ವರದಿ ಹಾಗೂ ಪರಿಸರ ಸೂಕ್ಷ್ಮ ವಲಯ ಘೋಷಣೆಯಿಂದ ರೈತರು ಮತ್ತು ಗ್ರಾಮಸ್ಥರಿಗೆ ಎದುರಾಗಬಹುದಾದ ಸಮಸ್ಯೆಗಳ ಕುರಿತು ಅವರು ಆತಂಕ ವ್ಯಕ್ತಪಡಿಸಿದರು. ಸ್ಥಳೀಯ ಜನರ ಅಭಿಪ್ರಾಯಗಳನ್ನು ಪರಿಗಣಿಸಿ, ಕೃಷಿಕರು ಹಾಗೂ ಗ್ರಾಮಸ್ಥರ ಹಿತಾಸಕ್ತಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಂತೋಷ್ ಕುತ್ತಮೊಟ್ಟೆ ಮಾತನಾಡಿ, “ನಾವು ಸಂಘಟನೆಯೊಂದಿಗೆ ಇದ್ದೇವೆ. ಪಶ್ಚಿಮ ಘಟ್ಟ ಮತ್ತು ಜನವಸತಿ ಪ್ರದೇಶಗಳ ಗಡಿಯನ್ನು ಸ್ಪಷ್ಟವಾಗಿ ಗುರುತಿಸಿ, ರೈತರಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ಸರಕಾರ ಗಮನಹರಿಸಬೇಕು” ಎಂದು ಹೇಳಿದರು.
ಗ್ರಾಮ ಪಂಚಾಯಿತಿನಿಕಟಪೂರ್ವ ಅಧ್ಯಕ್ಷ ಕೇಶವ ಅಡ್ತಲೆ, ದಯಾನಂದ ಕುರುಂಜಿ, ಬಾಲಕೃಷ್ಣ ರೈ ಅರಂತೋಡು, ತೀರ್ಥರಾಮ ಪರ್ನೊಜಿ, ಕೇಶವ ಕೊಳಲುಮೂಲೆ, ಉಮಾಶಂಕರ ಎ.ಜಿ., ಆನಂದ ಕಲ್ಲಗದ್ದೆ, ತಿಮ್ಮಯ್ಯ ಮೆತ್ತಡ್ಕ, ತೀರ್ಥರಾಮ ಅಡ್ಕಬಳೆ, ರಮಾನಂದ ಬಾಳೆಕಜೆ, ಹರೀಶ್ ಆಚಾರ್ಯ, ಪ್ರಸನ್ನ ಕೆ.ಪಿ., ಕೆ.ಕೆ. ನಾರಾಯಣ ಕುಂಟುಕಾಡು, ಪ್ರಭಾಕರ ರೈ, ಕಮಲಾಕ್ಷ ಪಡ್ಪು, ಶಶಿಕುಮಾರ್ ಉಳುವಾರು ಅಡ್ತಲೆ, ಗಾಂಧಿ ಅಡ್ಯಡ್ಕ ಪುರುಶೋತ್ತಮ‌ ಕಿರ್ಲಾಯ, ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕಾರ್ಯಕರ್ತರು, ರೈತರು ಹಾಗೂ ಅರಂತೋಡು–ತೊಡಿಕಾನ ಗ್ರಾಮದ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.











































Leave a Comment

Your email address will not be published. Required fields are marked *

error: Content is protected !!
Scroll to Top