ಸೆ.26ರಂದು ಸುಳ್ಯಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ವಿವಿಧ ರಸ್ತೆ ಹಾಗೂ ಸೇತುವೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಶಾಸಕಿ ಭಾಗೀರಥಿ ಮುರುಳ್ಯ ಅವರು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ತೊಡಿಕಾನ–ಪಟ್ಟಿ–ಭಾಗಮಂಡಲ ರಸ್ತೆಯ ಅಭಿವೃದ್ಧಿ, ಅರಂತೋಡು–ಮರ್ಕಂಜ–ಎಲಿಮಲೆ ರಸ್ತೆಗೆ ಅನುದಾನ ಬಿಡುಗಡೆ ಸೇರಿದಂತೆ ಕ್ಷೇತ್ರ ವ್ಯಾಪ್ತಿಯ ಲೋಕೋಪಯೋಗಿ ಇಲಾಖೆಯ ರಸ್ತೆಗಳ ಅಭಿವೃದ್ಧಿ ಹಾಗೂ ವಿವಿಧ ಸೇತುವೆಗಳ ನಿರ್ಮಾಣಕ್ಕೆ ಅಗತ್ಯ ಅನುದಾನ ಒದಗಿಸುವಂತೆ ಶಾಸಕರು ಸಚಿವರಲ್ಲಿ ಮನವಿ ಮಾಡಿದರು.
ಮನವಿ ಸ್ವೀಕರಿಸಿದ ಸಚಿವ ಸತೀಶ್ ಜಾರಕಿಹೊಳಿ ಅವರು ಸೆ.26ರಂದು ಸುಳ್ಯಕ್ಕೆ ಭೇಟಿ ನೀಡಿ ಮೈತಡ್ಕ–ಪಂಜಿಕಲ್ಲು ಸೇತುವೆ ಹಾಗೂ ತೊಡಿಕಾನ–ಪಟ್ಟಿ–ಭಾಗಮಂಡಲ ರಸ್ತೆಯನ್ನು ವೀಕ್ಷಿಸುವುದಾಗಿ ಭರವಸೆ ನೀಡಿದರು. ಸ್ಥಳ ಪರಿಶೀಲನೆ ನಡೆಸಿ ಸಂಬಂಧಪಟ್ಟವರೊಂದಿಗೆ ಚರ್ಚಿಸಿದ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರೀಶ ಕಂಜಿಪಿಲಿ, ಅರಂತೋಡು ಸೊಸೈಟಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಪೆರಾಬೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಸದಾನಂದ ಕುಂಟ್ಯಾನ ಹಾಗೂ ಪಕ್ಷದ ಮಾಜಿ ಗ್ರಾಮ ಸಮಿತಿ ಅಧ್ಯಕ್ಷ ಸುರೇಶ್ ಕುಂಡಡ್ಕ ಉಪಸ್ಥಿತರಿದ್ದರು.











































Leave a Comment

Your email address will not be published. Required fields are marked *

error: Content is protected !!
Scroll to Top