ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ

ಬೆಂಗಳೂರು, ಸೆ.24: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಹಲವೆಡೆ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿ ಸಂಭವಿಸುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.ಸೆ.24ರಂದು ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದ್ದು, ಸೆ.25ರವರೆಗೂ ಗುಡುಗು-ಮಿಂಚಿನೊಂದಿಗೆ ಮಳೆ ಮುಂದುವರಿಯಬಹುದು ಎಂದು IMD ಮುನ್ಸೂಚನೆ ತಿಳಿಸಿದೆ. ಸೆ.26ರಿಂದ ಎಚ್ಚರಿಕೆ ಮಟ್ಟದಲ್ಲಿ ಇಳಿಕೆಯಾಗುವ ನಿರೀಕ್ಷೆಯಿದೆ.ಬೆಂಗಳೂರಿನಲ್ಲಿಯೂ ಸೆ.24ರಂದು ಗುಡುಗು-ಮಿಂಚು ಹಾಗೂ ಗಂಟೆಗೆ 30–40 ಕಿ.ಮೀ. ವೇಗದ ಗಾಳಿಯೊಂದಿಗೆ ಮಳೆಯ ಸಾಧ್ಯತೆಯನ್ನು IMD ಸೂಚಿಸಿದೆ.











































Leave a Comment

Your email address will not be published. Required fields are marked *

error: Content is protected !!
Scroll to Top