ಜಿಲ್ಲಾ ಮಟ್ಟದ ಗುಡ್ಡಗಾಡು ಓಟ:ರಾಜ್ಯಮಟ್ಟಕ್ಕೆ ಲಿತೇಶ್ ಪೀಚೆ ಆಯ್ಕೆ

ಪೆರಾಜೆ : ಪದವಿ ಪೂರ್ವ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಹಾಗೂ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು, ಎಡಪದವು ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕರ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಸ್ಪರ್ಧೆಯಲ್ಲಿ ತಂಡದ ಸದಸ್ಯ ಲಿತೇಶ್ ಪೀಚೆ ಅವರು ಉತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟದ ಗುಡ್ಡಗಾಡು ಓಟ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಲಿತೇಶ್ ಅವರು ಮಡಿಕೇರಿ ತಾಲೂಕಿನ ಪೆರಾಜೆ ಗ್ರಾಮದ ದಿವಂಗತ ಉತ್ತರಕುಮಾರ ಪೀಚೆ ಹಾಗೂ ಸುಶೀಲ ದಂಪತಿಯ ಪುತ್ರ. ಪ್ರಸ್ತುತ ಉಜಿರೆಯ ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ಲಿತೇಶ್ ಅವರಿಗೆ ಕಾಲೇಜಿನ ದೈಹಿಕ ನಿರ್ದೇಶಕರಾದ ಸಂದೇಶ್ ಬಿ. ಪೂಂಜಾ ಅವರು ತರಬೇತಿ ನೀಡುತ್ತಿದ್ದಾರೆ.











































Leave a Comment

Your email address will not be published. Required fields are marked *

error: Content is protected !!
Scroll to Top