ಯುವಜನ ಸಂಯುಕ್ತ ಮಂಡಳಿ ಮಹಾಸಭೆ: ರಂಜಿತ್ ಅಡ್ತಲೆಗೆ ಯುವರತ್ನ ಪ್ರಶಸ್ತಿ ಪ್ರದಾನ

ಸುಳ್ಯ, ಸೆ.26: ಯುವಜನ ಸಂಯುಕ್ತ ಮಂಡಳಿ ಸುಳ್ಯ ಇದರ ವಾರ್ಷಿಕ ಮಹಾಸಭೆ ಹಾಗೂ 2025-26ನೇ ಸಾಲಿನ ಯುವರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಸೆ.26ರಂದು ಸುಳ್ಯದಲ್ಲಿ ನಡೆಯಿತು.
ಸಮಾರಂಭದಲ್ಲಿ ಸಮಾಜಸೇವೆ, ಯುವಜನ ಸಂಘಟನೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ 2025-26ನೇ ಸಾಲಿನ ಯುವರತ್ನ ಪ್ರಶಸ್ತಿಗೆ ಆಯ್ಕೆಯಾಗಿರುವ ರಂಜಿತ್ ಅಡ್ತಲೆ ಅವರನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಪ್ರಶಸ್ತಿ ನೀಡಿ ಗೌರವಿಸಿದರು.
ನಂತರ ಮಾತನಾಡಿದ ಅವರು ಯುವಜನರು ಸಮಾಜದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಯುವಶಕ್ತಿಯನ್ನು ಸಕಾರಾತ್ಮಕ ಚಟುವಟಿಕೆಗಳಿಗೆ ಬಳಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ಭಾಗವಹಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂಬ ಆಶಯವನ್ನು ಅವರು ವ್ಯಕ್ತಪಡಿಸಿದರು. ಯುವಜನರ ಪ್ರತಿಭೆ ಹಾಗೂ ಸೇವೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಇಂತಹ ಪ್ರಶಸ್ತಿಗಳ ಉದ್ದೇಶವಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಪವನ್ ಪಲ್ಲತ್ತಡ್ಕ ವಹಿಸಿದ್ದರು.
ಸಮಾರಂಭದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಹಿರಿಯ ಸಹಕಾರಿ ಧುರೀಣ ಮಾಧವ ಗೌಡ ಜಾಕೆ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನೋಡೆಲ್ ಅಧಿಕಾರಿ ದೇವರಾಜ್ ಮುದ್ಲಾಜೆ, ಯುವಜನ ಸೇವಾ ಸಂಸ್ಥೆ ಸುಳ್ಯ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಯುವಜನ ಸಂಯುಕ್ತ ಮಂಡಳಿ ಗೌರವಾಧ್ಯಕ್ಷ ವಿಜಯಕುಮಾರ್ ಉಬರಡ್ಕ ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರಮುಖರು, ಯುವಜನ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಮಹಾಸಭೆಯಲ್ಲಿ ಮಂಡಳಿಯ ವಿವಿಧ ಚಟುವಟಿಕೆಗಳು, ಯುವಜನರಿಗಾಗಿ ಹಮ್ಮಿಕೊಳ್ಳಲಾದ ಕಾರ್ಯಕ್ರಮಗಳು ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕಾರ್ಯಯೋಜನೆಗಳ ಕುರಿತು ಚರ್ಚೆ ನಡೆಯಿತು. ಯುವಕರ ಪ್ರತಿಭೆ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಮತ್ತು ಸಮಾಜಸೇವೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸಂಘಟನೆಯ ಕಾರ್ಯಚಟುವಟಿಕೆಗಳನ್ನು ಮತ್ತಷ್ಟು ವಿಸ್ತರಿಸುವ ಕುರಿತು ಗಮನ ಹರಿಸಲಾಯಿತು.
ಪ್ರಶಸ್ತಿ ಸ್ವೀಕರಿಸಿದ ರಂಜಿತ್ ಅಡ್ತಲೆ ಅವರಿಗೆ ಗಣ್ಯರು ಅಭಿನಂದನೆ ಸಲ್ಲಿಸಿದರು.
ಪ್ರಸಾದ್ ಕಾಟೂರು ಕಾರ್ಯಕ್ರಮ ನಿರೂಪಿಸಿದರು.ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದ ಯುವಕ ಯುವತಿ ಮಂಡಲಗಳಿಗೆ ಪ್ರಶಸ್ತಿ ನೀಡಿ‌ ಗೌರವಿಸಲಾಯಿತು.











































Leave a Comment

Your email address will not be published. Required fields are marked *

error: Content is protected !!
Scroll to Top