ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್‌ ಮಾಡುವ ಕಾಂಗ್ರೆಸ್‌ ಸರ್ಕಾರದ ದ್ವೇಷ ರಾಜಕಾರಣ ಖಂಡನೀಯ: ಚೌಟ

ಮಂಗಳೂರು: ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರವು ಹಿಂದೂ ಪರ ಹೋರಾಟ ಸಂಘಟನೆಗಳ ಕಾರ್ಯಕರ್ತರ ಧ್ವನಿಯನ್ನು ಹತ್ತಿಕ್ಕುವುದಕ್ಕೆ ಹೊರಟಿರುವುದನ್ನು ಖಂಡಿಸಿ ನಾಳೆ(ಸೋಮವಾರ) ನಡೆಯಲಿರುವ ಬಿ.ಸಿ. ರೋಡ್‌ ಚಲೋ ಪ್ರತಿಭಟನಾ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಹಾಗೂ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ. ಬ್ರಿಜೇಶ್‌ ಚೌಟ ಅವರು ಮನವಿ ಮಾಡಿದ್ದಾರೆ.











































ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್‌ ಸರ್ಕಾರವು ಪೊಲೀಸ್‌ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಹಿಂದೂ ಪರ ಸಂಘಟನೆಗಳನ್ನು ದಮನಿಸುವ ಪ್ರಯತ್ನ ನಡೆಸುತ್ತಿರುವುದು ಖಂಡನೀಯ. ರಾಜಕೀಯ ಪ್ರೇರಿತವಾಗಿ ಯಾರನ್ನೋ ಮೆಚ್ಚಿಸಲು ಹಿಂದೂ ಸಂಘಟನೆಗಳು ಹಾಗೂ ಹಿಂದೂ ಸಮಾಜದ ಪ್ರಮುಖರನ್ನು ಟಾರ್ಗೆಟ್‌ ಮಾಡುವುದನ್ನು ನಿಲ್ಲಿಸಬೇಕು. ಕಾಂಗ್ರೆಸ್‌ ಸರ್ಕಾರವು ರಾಜ್ಯದಲ್ಲಿ ಆಡಳಿತಕ್ಕೆ ಬಂದ ಬಳಿಕ ಪದೇಪದೇ ರೀತಿ ಹಿಂದೂ ಪರ ಹೋರಾಟಗಾರರ ಧ್ವನಿಯನ್ನು ದಮನಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ.

ಕಾಂಗ್ರೆಸ್‌ ಸರ್ಕಾರವು ಈ ರೀತಿ ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ, ಕೋಕಾ ಕಾಯ್ದೆಯನ್ನು ಹಾಕುವ ಮೂಲಕ ದ್ವೇಷದ ರಾಜಕಾರಣವನ್ನು ಪುನರಾವರ್ತಿಸುತ್ತಿದೆ. ಕಾಂಗ್ರೆಸ್‌ನವರ ಈ ರೀತಿಯ ತುಷ್ಠೀಕರಣ ರಾಜಕಾರಣವನ್ನು ಕೊನೆಗೊಳಿಸಬೇಕಾದರೆ, ಹಿಂದೂ ಸಮಾಜವು ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗಿದೆ. ಈ ಹಿನ್ನಲೆಯಲ್ಲಿ ಬಿ.ಸಿ. ರೋಡ್‌ ಚಲೋಗೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಹಿಂದೂ ಸಮಾಜದವರು ಪಾಲ್ಗೊಂಡು ಈ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕೆಂದು ಕ್ಯಾ.ಚೌಟ ಅವರು ಕೋರಿದ್ದಾರೆ.

Leave a Comment

Your email address will not be published. Required fields are marked *

error: Content is protected !!
Scroll to Top