ಕೊನೇ ಕ್ಷಣದಲ್ಲಿ ಬ್ಯಾಂಕ್ ಮುಷ್ಕರ ಮುಂದೂಡಿಕೆ

ಸೆ.28: ದೇಶದಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ನಡೆಯಬೇಕಿದ್ದ ಬ್ಯಾಂಕ್ ಮುಷ್ಕರ ಕೊನೇ ಕ್ಷಣದಲ್ಲಿ ಮುಂದೂಡಿಕೆಯಾಗಿದೆ. ಸೆ.28ರಿಂದ 30ರವರೆಗೆ ಮುಷ್ಕರ ನಡೆಸಲು ಬ್ಯಾಂಕ್ ನೌಕರರ ಸಂಘಟನೆಗಳು ಕರೆ ನೀಡಿದ್ದವು.ಸೆ.27ರ ರಾತ್ರಿ ಭಾರತೀಯ ಬ್ಯಾಂಕ್ಸ್ ಅಸೋಸಿಯೇಷನ್‌ (IBA) ಮತ್ತು ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್‌ (UFBU) ನಡುವೆ ನಡೆದ ಮಾತುಕತೆಯ ಬಳಿಕ ಮುಷ್ಕರವನ್ನು ಮುಂದೂಡಲು ನಿರ್ಧರಿಸಲಾಗಿದೆ.ಬ್ಯಾಂಕ್‌ಗಳಲ್ಲಿ ವಾರಕ್ಕೆ ಐದು ದಿನಗಳ ಕೆಲಸದ ವ್ಯವಸ್ಥೆ ಜಾರಿ, ಉಳಿದ ಶನಿವಾರಗಳನ್ನು ರಜೆಯನ್ನಾಗಿ ಘೋಷಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿದ್ದವು.ಮಾತುಕತೆಯ ಬಳಿಕ ಉಳಿದ ಶನಿವಾರಗಳನ್ನು ರಜೆಯನ್ನಾಗಿ ಮಾಡುವ ವಿಚಾರ ಪರಿಶೀಲಿಸಲು IBA ಮತ್ತು UFBU ಪ್ರತಿನಿಧಿಗಳನ್ನೊಳಗೊಂಡ ಉನ್ನತ ಮಟ್ಟದ ಸಮಿತಿ ರಚಿಸಲು ಒಪ್ಪಿಗೆ ನೀಡಲಾಗಿದೆ. ಅಲ್ಲದೆ, ಹಿರಿಯ ಅಧಿಕಾರಿಗಳ ಕಾರ್ಯಕ್ಷಮತೆ ಆಧಾರಿತ ಪ್ರೋತ್ಸಾಹಧನ (PLI) ಸೇರಿದಂತೆ ಬಾಕಿ ಉಳಿದಿರುವ ಇತರ ವಿಚಾರಗಳ ಬಗ್ಗೆಯೂ ಚರ್ಚೆ ನಡೆಸಲು ನಿರ್ಧರಿಸಲಾಗಿದೆ.ಮುಷ್ಕರ ಮುಂದೂಡಿಕೆಯಾಗಿರುವುದರಿಂದ ಸೆ.28ರಿಂದ ಬ್ಯಾಂಕ್ ಶಾಖೆಗಳ ಸಾಮಾನ್ಯ ಸೇವೆ ಮುಂದುವರಿಯುವ ನಿರೀಕ್ಷೆಯಿದೆ. ಹೀಗಾಗಿ ಬ್ಯಾಂಕ್ ಗ್ರಾಹಕರು ಎಂದಿನಂತೆ ಶಾಖಾ ವ್ಯವಹಾರಗಳನ್ನು ನಡೆಸಬಹುದಾಗಿದೆ.











































Leave a Comment

Your email address will not be published. Required fields are marked *

error: Content is protected !!
Scroll to Top