ಅಜ್ಜಾವರ : ತಾಲೂಕು ಮೊಗೇರ ಸಂಘದ ಸ್ಥಾಪಕಾಧ್ಯಕ್ಷ, ಅಜ್ಜಾವರ ಗ್ರಾಮದ ಮೇನಾಲ–ಪಲ್ಲತ್ತಡ್ಕ ನಿವಾಸಿ ದಾಸಪ್ಪ (63) ಅವರು ಅಲ್ಪಕಾಲದ ಅಸೌಖ್ಯದಿಂದ ಸೆ.29ರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.ಕಳೆದ ಕೆಲ ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಅವರಿಗೆ ಮೊದಲು ಸುಳ್ಯದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.ಮೃತರು ಪತ್ನಿ ಹೇಮಪ್ರಭಾ, ಪುತ್ರ ತಿಲಕ್ ರಾಜ್, ಪುತ್ರಿ ಧನುಶ್ರೀ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ತಾಲೂಕು ಮೊಗೇರ ಸಂಘದ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದಾಸಪ್ಪ ಅವರ ನಿಧನಕ್ಕೆ ಸಂಘದ ಪದಾಧಿಕಾರಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮೊಗೇರ ಸಂಘದ ಸ್ಥಾಪಕಾಧ್ಯಕ್ಷ ದಾಸಪ್ಪ ನಿಧನ











