ಕುಟುಂಬದೊಳಗಿನ ಹೊಡೆದಾಟ ಪ್ರಕರಣ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಸುಳ್ಯ: ಕನಕಮಜಲು ಪರಿಸರದಲ್ಲಿ ಕುಟುಂಬದ ಸದಸ್ಯರ ನಡುವೆ ನಡೆದಿದ್ದ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿ ಕಳೆದ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಕನಕಮಜಲು ನಿವಾಸಿ ಸುರೇಂದ್ರ ಬಂಧಿತ ಆರೋಪಿ. ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಆರೋಪಿಯ ಬಗ್ಗೆ ಮಾಹಿತಿ ಸಂಗ್ರಹಿಸಿದ ಪೊಲೀಸರು ಆಲೆಟ್ಟಿ ಬಳಿ ಆತನನ್ನು ದಸ್ತಗಿರಿ ಮಾಡಿದ್ದಾರೆ. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದುಬಂದಿದೆ.















Leave a Comment

Your email address will not be published. Required fields are marked *

error: Content is protected !!
Scroll to Top