ಗಾಂಧೀಜಿಯವರ ಕನಸಿನ ಭಾರತ ನಮ್ಮ ಪ್ರತಿಜ್ಞೆಯಾಗಬೇಕು: ಭರತ್ ಮುಂಡೋಡಿ

ಸುಳ್ಯ, ಅ.2: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 157ನೇ ಜಯಂತಿ ಹಾಗೂ ಭಾರತದ 2ನೇ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆಯನ್ನು ಸುಳ್ಯ ತಾಲೂಕು ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ದೀಪ ಪ್ರಜ್ವಲಿಸಿ, ಪುಷ್ಪಾರ್ಚನೆ ನೆರವೇರಿಸಿದ ಬಳಿಕ ಸಂದೇಶ ಭಾಷಣ ಮಾಡಿದರು. ಯಾವುದೇ ರಾಜಕೀಯ ಉನ್ನತ ಹುದ್ದೆಯನ್ನು ಹೊಂದಿರದ ನಾಯಕ ನಿಧನರಾದಾಗ ವಿಶ್ವಸಂಸ್ಥೆಯಲ್ಲಿ ಧ್ವಜವನ್ನು ಅರ್ಧಕ್ಕೆ ಇಳಿಸಿ ಸಂತಾಪ ಸೂಚಿಸಿದ ನಿದರ್ಶನ ಬೇರೆ ಇಲ್ಲ. ಗಾಂಧೀಜಿಯವರ ವಿಚಾರಧಾರೆಯನ್ನು ಇಡೀ ವಿಶ್ವ ಅಂಗೀಕರಿಸಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ ಎಂದು ಅವರು ಹೇಳಿದರು. ಗಾಂಧೀಜಿಯವರ ಕನಸಿನ ಭಾರತ ನಿರ್ಮಾಣ ನಮ್ಮ ಪ್ರತಿಜ್ಞೆಯಾಗಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಫ ಹಾಗೂ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಾಮೊಟ್ಟೆ ಭಾಗವಹಿಸಿದ್ದರು.
ವೇದಿಕೆಯಲ್ಲಿ ತಾಲೂಕು ತಹಶೀಲ್ದಾರ್ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷೆ ಶ್ರೀಮತಿ ಮಂಜುಳಾ, ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಎಸ್. ಹರಗಿ ಉಪಸ್ಥಿತರಿದ್ದರು.
ಉಪತಹಶೀಲ್ದಾರ್ ಚಂದ್ರಕಾಂತ್ ಸ್ವಾಗತಿಸಿ, ಸಿಡಿಪಿಒ ಶ್ರೀಮತಿ ಶೈಲಜಾ ವಂದಿಸಿದರು.









































































Leave a Comment

Your email address will not be published. Required fields are marked *

error: Content is protected !!
Scroll to Top