ರಸ್ತೆ ಅಪಘಾತದಲ್ಲಿ ನಾವೆಲ್ಲರು ಸುರಕ್ಷಿತ : ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿಕೆ

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಾರು ಇಂದು ರಸ್ತೆ ಅಪಘಾತಕ್ಕೀಡಾಗಿದ್ದು, ಶಾಸಕಿ ಸೇರಿದಂತೆ ಕಾರಿನಲ್ಲಿದ್ದ ಎಲ್ಲರೂ ಯಾವುದೇ ಗಾಯಗಳಿಲ್ಲದೆ ಸುರಕ್ಷಿತವಾಗಿದ್ದಾರೆ.ಅಪಘಾತದ ಕುರಿತು ಪ್ರತಿಕ್ರಿಯಿಸಿರುವ ಶಾಸಕಿ ಭಾಗೀರಥಿ ಮುರುಳ್ಯ, ಕಾರಿಗೆ ಸಣ್ಣ ಪ್ರಮಾಣದ ರಸ್ತೆ ಅಪಘಾತ ಸಂಭವಿಸಿದೆ. ದೇವರ ಕೃಪೆಯಿಂದ ಕಾರಿನಲ್ಲಿದ್ದ ಯಾರಿಗೂ ಯಾವುದೇ ರೀತಿಯ ತೊಂದರೆ ಅಥವಾ ಗಾಯವಾಗಿಲ್ಲ. ನಾವೆಲ್ಲರೂ ಸಂಪೂರ್ಣ ಸುರಕ್ಷಿತವಾಗಿದ್ದು, ಕ್ಷೇಮವಾಗಿದ್ದೇವೆ ಎಂದು ತಿಳಿಸಿದ್ದಾರೆ.ಅಪಘಾತದ ಸುದ್ದಿ ತಿಳಿದು ಕಾರ್ಯಕರ್ತರು, ಅಭಿಮಾನಿಗಳು, ಬಂಧು-ಬಳಗ ಹಾಗೂ ಹಿತೈಷಿಗಳು ಆತಂಕಪಡುವ ಅಗತ್ಯವಿಲ್ಲ. ಯಾರೂ ಗಾಬರಿಯಾಗಬೇಡಿ. ನಾವೆಲ್ಲರೂ ಸುರಕ್ಷಿತವಾಗಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.ತಮ್ಮ ಬಗ್ಗೆ ಕಾಳಜಿ ವಹಿಸಿ ವಿಚಾರಿಸಿದ, ಹಾರೈಸಿದ ಹಾಗೂ ಪ್ರಾರ್ಥಿಸಿದ ಪ್ರತಿಯೊಬ್ಬರಿಗೂ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿರುವ ಶಾಸಕಿ, ತಮ್ಮೆಲ್ಲರ ಪ್ರೀತಿ, ಆಶೀರ್ವಾದ ಹಾಗೂ ಹಾರೈಕೆ ಸದಾ ನಮ್ಮೊಂದಿಗಿರಲಿ ಎಂದು ಮನವಿ ಮಾಡಿದ್ದಾರೆ.















Leave a Comment

Your email address will not be published. Required fields are marked *

error: Content is protected !!
Scroll to Top