ತೊಡಿಕಾನ : ಕಾಡಾನೆಗಳ ಹಾವಳಿ ಮುಂದುವರಿದಿದ್ದು, ತೊಡಿಕಾನ ಗ್ರಾಮದ ಮರ್ಪಂಗಲ್ಲಿನ ಅಮೆಮನೆ ಪ್ರದೇಶದಲ್ಲಿ ಆನೆ ದಾಳಿ ನಡೆಸಿ ಕೃಷಿ ಬೆಳೆಗಳಿಗೆ ವ್ಯಾಪಕ ಹಾನಿ ಉಂಟುಮಾಡಿರುವ ಘಟನೆ ಅ.5ರಂದು ಬೆಳಕಿಗೆ ಬಂದಿದೆ.ಶ್ರೀಮತಿ ಸೋಜಾವತಿ ವೆಂಕಟರಮಣ ಗೌಡ ಅವರ ತೋಟಕ್ಕೆ ನುಗ್ಗಿದ ಆನೆಗಳು ಹಲವು ತೆಂಗಿನ ಮರಗಳು ಹಾಗೂ ಅಡಿಕೆ ಮರಗಳನ್ನು ಹಾನಿಗೊಳಿಸಿದ್ದು, ಬಾಳೆ ಗಿಡಗಳನ್ನೂ ತುಳಿದು ನಾಶಪಡಿಸಿವೆ. ಇದರಿಂದ ಕೃಷಿಕರಿಗೆ ಗಣನೀಯ ಪ್ರಮಾಣದ ಬೆಳೆ ನಷ್ಟ ಸಂಭವಿಸಿದೆ.ಆನೆಗಳ ಹಾವಳಿಯಿಂದ ಕೃಷಿಕರಲ್ಲಿ ಆತಂಕ ಹೆಚ್ಚಿದ್ದು, ಕಾಡಾನೆಗಳ ಸಂಚಾರದ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಸ್ಥಳೀಯರಿಗೆ ಸೂಚಿಸಲಾಗಿದೆ.ಮಾಹಿತಿ ತಿಳಿದು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಆನೆ ಟಾಸ್ಕ್ ಫೋರ್ಸ್ನ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಹಾನಿಗೊಳಗಾದ ಪ್ರದೇಶವನ್ನು ಪರಿಶೀಲಿಸಿದರು. ಬೆಳೆ ನಷ್ಟದ ಕುರಿತು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
ತೊಡಿಕಾನದಲ್ಲಿ ಆನೆ ಹಾವಳಿ











