ಪೆರುವಾಜೆ: ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ಸೇವಾ ಸಮಿತಿ ಪೆರುವಾಜೆಯಲ್ಲಿ ನೂತನ ಸಮಿತಿಯನ್ನು ರಚಿಸಲಾಗಿದ್ದು, ಅಧ್ಯಕ್ಷರಾಗಿ ಪೆರುವಾಜೆ ಗುತ್ತು ಸಚಿನ್ ರಾಜ್ ಶೆಟ್ಟಿ ಹಾಗೂ ಕಾರ್ಯದರ್ಶಿಯಾಗಿ ಚಿದಾನಂದ ರೈ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಅಜೈ ಶೆಟ್ಟಿ, ಕೋಶಾಧಿಕಾರಿಯಾಗಿ ನಿತಿನ್ ರಾಜ್ ಶೆಟ್ಟಿ ಹಾಗೂ ನಿರ್ದೇಶಕರಾಗಿ ಪ್ರಸಾದ ರೈ ಮರಿಕೇಯಿ, ಕರುಣಾಕರ, ಹೇಮಂತ್ ಗೌಡ ಪೆರುವಾಜೆ ಮತ್ತು ಲಕ್ಷ್ಮಣ ಅವರು ನೂತನ ಸಮಿತಿಯಲ್ಲಿ ಪದಾಧಿಕಾರಿಗಳಾಗಿ ಆಯ್ಕೆಯಾಗಿದ್ದಾರೆ.
ಪೆರುವಾಜೆ ಗ್ರಾಮದಲ್ಲಿ ಸಹಕಾರಿ ಸಂಘಗಳ ಮೂಲಕ ನೋಂದಣಿ ಪಡೆದ ಏಕೈಕ ಸಂಸ್ಥೆ ಇದಾಗಿದೆ ಎಂದು ಸಮಿತಿಯ ನೂತನ ಅಧ್ಯಕ್ಷ ಸಚಿನ್ ರಾಜ್ ಶೆಟ್ಟಿ ತಿಳಿಸಿದ್ದಾರೆ.
ಅಯ್ಯಪ್ಪ ಸ್ವಾಮಿ ಭಕ್ತರ ಹಿತದೃಷ್ಟಿಯಿಂದ ಹಾಗೂ ಧಾರ್ಮಿಕ ಮತ್ತು ಸೇವಾ ಚಟುವಟಿಕೆಗಳನ್ನು ಸಂಘಟಿತವಾಗಿ ನಡೆಸುವ ಉದ್ದೇಶದಿಂದ ಈ ಸೇವಾ ಸಮಿತಿಯನ್ನು ರಚಿಸಲಾಗಿದೆ. ಮುಂದಿನ ದಿನಗಳಲ್ಲಿ ಭಕ್ತಾದಿಗಳ ಸಹಕಾರದೊಂದಿಗೆ ಶ್ರೀ ಅಯ್ಯಪ್ಪ ಭಜನ ಮಂದಿರ ನಿರ್ಮಿಸುವುದು ಸಮಿತಿಯ ಪ್ರಮುಖ ಉದ್ದೇಶವಾಗಿದೆ ಎಂದು ಅವರು ತಿಳಿಸಿದ್ದಾರೆ.













