ಬೆಂಗಳೂರು: ಇಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಶಿಕ್ಷಣ ಕೋರ್ಸ್ಗಳಿಗೆ ಪ್ರವೇಶ ಪಡೆಯುವ ಗ್ರಾಮೀಣ ಭಾಗದ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ.7.5ರಷ್ಟು ಮೀಸಲಾತಿ ಕಲ್ಪಿಸಿ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ.
ಸರಕಾರಿ ಶಾಲೆಗಳಲ್ಲಿ ಒಂದರಿಂದ ಹತ್ತನೇ ತರಗತಿವರೆಗೆ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಮೀಸಲಾತಿಯ ಪ್ರಯೋಜನ ಪಡೆಯಲಿದ್ದಾರೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣ ಕೋರ್ಸ್ಗಳ ಪ್ರವೇಶದಲ್ಲಿ ಈಗಾಗಲೇ ಜಾರಿಯಲ್ಲಿರುವ ಶೇ.15ರಷ್ಟು ಮೀಸಲಾತಿಯಲ್ಲೇ ಅರ್ಧದಷ್ಟು ಸೀಟುಗಳನ್ನು ಸರಕಾರಿ ಶಾಲಾ ಮಕ್ಕಳಿಗೆ ಮೀಸಲಿಡುವಂತೆ ನಿಯಮಕ್ಕೆ ತಿದ್ದುಪಡಿ ತರಲಾಗಿದೆ.
ಸರಕಾರಿ ಶಾಲೆಗಳಲ್ಲಿ ಓದುವ ಗ್ರಾಮೀಣ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಅವಕಾಶಗಳನ್ನು ಹೆಚ್ಚಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಹಿಂದೆ ಸೆಪ್ಟೆಂಬರ್ನಲ್ಲಿ ಈ ಸಂಬಂಧ ಕರಡು ಅಧಿಸೂಚನೆ ಪ್ರಕಟಿಸಲಾಗಿತ್ತು. ಇದೀಗ ಅಂತಿಮ ಅಧಿಸೂಚನೆ ಹೊರಡಿಸುವ ಮೂಲಕ ಸರಕಾರ ಮೀಸಲಾತಿ ಜಾರಿಗೆ ಮುಂದಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಗ್ರಾಮೀಣ ಭಾಗದ ಸರಕಾರಿ ಶಾಲೆಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಈ ಮೀಸಲಾತಿ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.
ವೃತ್ತಿ ಶಿಕ್ಷಣ ಪ್ರವೇಶದಲ್ಲಿ ಸರಕಾರಿ ಶಾಲಾ ಮಕ್ಕಳಿಗೆ ಶೇ.7.5 ಮೀಸಲಾತಿ













