ಕಲ್ಮಡ್ಕದ ಬೊಮ್ಮೆಟ್ಟಿಯಲ್ಲಿ ವಿದ್ಯುತ್ ಶಾಕ್‌ಗೆ ಇಬ್ಬರು ಯುವಕರು ಬಲಿ

ಸುಳ್ಯ: ಅ.13: ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿ ಎಂಬಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಅ.12ರ ತಡರಾತ್ರಿ ಸುಮಾರು ಒಂದು ಗಂಟೆಯ ವೇಳೆಗೆ ಸಂಭವಿಸಿದೆ.
ಮೃತರನ್ನು ಬೊಮ್ಮೆಟ್ಟಿಯ ಗಣೇಶ್ ಹಾಗೂ ಭರತ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತೋರ್ವ ಬಾಲಕ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.
ವಿದ್ಯುತ್ ಶಾಕ್ ತಗುಲಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಇಬ್ಬರು ಯುವಕರ ಅಕಾಲಿಕ ಸಾವಿನಿಂದ ಸ್ಥಳೀಯವಾಗಿ ಶೋಕದ ವಾತಾವರಣ ನಿರ್ಮಾಣವಾಗಿದೆ.



















Leave a Comment

Your email address will not be published. Required fields are marked *

error: Content is protected !!
Scroll to Top