ಸುಳ್ಯ ಬಿಇಒ ಕಚೇರಿ ಅಧೀಕ್ಷಕ ಶಿವಪ್ರಸಾದ್ ಹೃದಯಾಘಾತದಿಂದ ನಿಧನ

ಸುಳ್ಯ: ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಶಿವಪ್ರಸಾದ್ ಜಿ.ಎಸ್. (54) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಜ್ವರದಿಂದ ಬಳಲುತ್ತಿದ್ದ ಅವರು ಅ.14ರಂದು ಕರ್ತವ್ಯಕ್ಕೆ ಹಾಜರಾಗದೆ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು. ಅ.15ರ ಮುಂಜಾನೆ ಸುಮಾರು 2 ಗಂಟೆಯ ವೇಳೆಗೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಮನೆಯವರು ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಸುಳ್ಯ ತಾಲೂಕಿನ ಉಬರಡ್ಕದ ಹುಳಿಯಡ್ಕ ನಿವಾಸಿ ಶಿವರಾಮ ನಾಯಕ್ ಅವರ ಪುತ್ರರಾಗಿದ್ದ ಶಿವಪ್ರಸಾದ್, ಪ್ರಸ್ತುತ ಪುತ್ತೂರಿನ ನೆಹರೂನಗರ ಸಮೀಪ ಪತ್ನಿ ಹಾಗೂ ಮಕ್ಕಳೊಂದಿಗೆ ವಾಸವಾಗಿದ್ದರು.
ಸುಳ್ಯ ತಾಲೂಕು ಪಂಚಾಯತ್‌ನಲ್ಲಿ ಅಕ್ಷರ ದಾಸೋಹ ವಿಭಾಗದ ಪ್ರಥಮ ದರ್ಜೆ ಸಹಾಯಕರಾಗಿ ಸರ್ಕಾರಿ ಸೇವೆಗೆ ಸೇರ್ಪಡೆಗೊಂಡಿದ್ದ ಅವರು, ಸುಮಾರು ಎರಡು ವರ್ಷಗಳ ಹಿಂದೆ ಪದೋನ್ನತಿ ಪಡೆದು ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

















Leave a Comment

Your email address will not be published. Required fields are marked *

error: Content is protected !!
Scroll to Top