ಸುಳ್ಯ: ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ವಾಹನ ಚಾಲಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಕಕ್ಕೆಬೆಟ್ಟು ನಿವಾಸಿ ರಾಘವ ನಾಯ್ಕ (63) ಅವರು ಅಲ್ಪಕಾಲದ ಅಸೌಖ್ಯದಿಂದ ಅ.15ರಂದು ನಿಧನರಾದರು.ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ವಾಹನ ಚಾಲಕರಾಗಿ ಕರ್ತವ್ಯ ನಿರ್ವಹಿಸಿದ್ದ ಅವರು, ನಿವೃತ್ತ ಜೀವನ ನಡೆಸುತ್ತಿದ್ದರು. ಮೃತರು ಕುಟುಂಬಸ್ಥರು ಹಾಗೂ ಬಂಧುಗಳನ್ನು ಅಗಲಿದ್ದಾರೆ.
ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ನಿವೃತ್ತ ವಾಹನ ಚಾಲಕ ರಾಘವ ನಾಯ್ಕ ನಿಧನ












