ಕಲ್ಲುಗುಂಡಿ, ಅ.26: ಕಲ್ಲುಗುಂಡಿ ಸಮೀಪದ ಕಡೆಪಾಲ ಸ್ವಾಮಿಕೊರಗಜ್ಜ ದೈವಸ್ಥಾನದ ದ್ವಾರದ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ಪಲ್ಟಿಯಾದ ಘಟನೆ ಅ.26ರಂದು ನಡೆದಿದೆ.
ಮಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಲಾರಿ, ಕಡೆಪಾಲ ಸ್ವಾಮಿಕೊರಗಜ್ಜ ದೈವಸ್ಥಾನದ ದ್ವಾರದ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಲಾರಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ಲಾರಿಯಲ್ಲಿದ್ದ ಚಾಲಕ, ಕ್ಲೀನರ್ ಸೇರಿದಂತೆ ಮೂವರು ಅಪಾಯದಿಂದ ಪಾರಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.













