ಮುರುಳ್ಯ ಭೂಮಿ ವಿವಾದ: ಅ.28ರ ಪ್ರತಿಭಟನೆಗೆ ಬಿಜೆಪಿ ಬೆಂಬಲ

ಸುಳ್ಯ: ತಾಲೂಕಿನ ಮುರುಳ್ಯ ಗ್ರಾಮದಲ್ಲಿ ರಕೇಶ್ವರಿ ದೇವಸ್ಥಾನದ ಸಮೀಪವಿರುವ ಕೃಷಿ ಭೂಮಿಯನ್ನು ದಫನ ಭೂಮಿಯಾಗಿ ಕಾಯ್ದಿರಿಸಿ ವಕ್ಫ್ ಮಂಡಳಿ ಆದೇಶ ಹೊರಡಿಸಿದೆ ಎನ್ನಲಾದ ವಿಚಾರಕ್ಕೆ ಸಂಬಂಧಿಸಿ, ಅ.28ರಂದು ಹಿಂದೂ ಹಿತರಕ್ಷಣಾ ವೇದಿಕೆ ಮುರುಳ್ಯ ವತಿಯಿಂದ ನಡೆಯಲಿರುವ ಪ್ರತಿಭಟನಾ ಸಭೆಗೆ ಸುಳ್ಯ ಬಿಜೆಪಿ ಸಂಪೂರ್ಣ ಬೆಂಬಲ ಘೋಷಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಸಂಬಂಧಪಟ್ಟ ಭೂಮಿಯಲ್ಲಿ ಹಿಂದೂಗಳು ನೂರಾರು ವರ್ಷಗಳಿಂದ ಕೃಷಿ ಮಾಡಿಕೊಂಡು ಬರುತ್ತಿದ್ದಾರೆ. ದೇವಸ್ಥಾನದ ಸಮೀಪದಲ್ಲಿರುವ ಈ ಭೂಮಿಯನ್ನು ಯಾವುದೇ ದಾಖಲೆಗಳ ಪರಿಶೀಲನೆ ಹಾಗೂ ಸೂಕ್ತ ವಿಚಾರಣೆ ಇಲ್ಲದೆ ವಕ್ಫ್ ಮಂಡಳಿಯ ಆಸ್ತಿ ಎಂದು ಘೋಷಿಸಿರುವುದು ಖಂಡನೀಯ ಎಂದು ತಿಳಿಸಿದ್ದಾರೆ.

ಭೂಮಿಗೆ ಸಂಬಂಧಿಸಿದ ಆದೇಶವನ್ನು ಕೂಡಲೇ ರದ್ದುಪಡಿಸಬೇಕು ಎಂದು ಆಗ್ರಹಿಸಿರುವ ಅವರು, ಈ ನಿಟ್ಟಿನಲ್ಲಿ ಅ.28ರಂದು ಮುರುಳ್ಯದಲ್ಲಿ ನಡೆಯಲಿರುವ ಪ್ರತಿಭಟನಾ ಸಭೆಗೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

error: Content is protected !!
Scroll to Top