ಅರಂತೋಡು , ನ. 5 : ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಇಲ್ಲಿ ತಾಲೂಕು ಮಟ್ಟದ 17 ಪಿಯುಸಿ ವಿಭಾಗದ ವಯೋಮಾನದ ಬಾಲಕ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಸಂಚಾಲಕರು ಹಾಗೂ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಎ ಸಿ ವಸಂತ ರವರು ಉದ್ಘಾಟಿಸಿ ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸಮಯ ಪ್ರಜ್ಞೆ ಬೆಳೆಸಲು ಸಹಕಾರಿಯಾಗುತ್ತದೆ ಎಂದರು ಪಿಯು ಬಾಲಕರ ವಿಭಾಗದಲ್ಲಿ ಸರ್ಕಾರಿ ಜೂನಿಯರ್ ಕಾಲೇಜು ಸುಳ್ಯ ಪ್ರಥಮ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ದ್ವಿತೀಯ ಬಾಲಕಿಯರ ವಿಭಾಗದಲ್ಲಿ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಪ್ರಥಮ ಸರ್ಕಾರಿ ಜೂನಿಯರ್ ಕಾಲೇಜು ಸುಳ್ಯ ದ್ವಿತೀಯ ಪ್ರೌಡ ಶಾಲಾ ಬಾಲಕರ ವಿಭಾಗದಲ್ಲಿ ಚೊಕ್ಕಾಡಿ ಪ್ರೌಢ ಶಾಲೆ ಕುಕ್ಕುಜಡ್ಕ ಪ್ರಥಮ ಭಗವಾನ್ ಶ್ರೀ ಸತ್ಯ ಸಾಯಿ ವಿದ್ಯಾಕೇಂದ್ರ ಚೊಕ್ಕಾಡಿ ದ್ವಿತೀಯ ಬಾಲಕಿಯರ ವಿಭಾಗದಲ್ಲಿ ಚೊಕ್ಕಾಡಿ ಪ್ರೌಢ ಶಾಲೆ ಕುಕ್ಕುಜಡ್ಕ ಪ್ರಥಮ ಭಗವಾನ್ ಶ್ರೀ ಸತ್ಯ ಸಾಯಿ ವಿದ್ಯಾಕೇಂದ್ರ ಚೊಕ್ಕಾಡಿ ದ್ವಿತೀಯ ಸ್ಥಾನ ವನ್ನು ಪಡೆದುಕೊಂಡಿತು ಈ ಸಂದರ್ಭದಲ್ಲಿ ಪಾಪ್ಯುಲರ್ ಎಜುಕೇಷನ್ ಸೊಸೈಟಿ (ರಿ.) ಅರಂತೋಡು ಇದರ ಕಾರ್ಯದರ್ಶಿ ಎ ಅಬ್ದುಲ್ಲಾ ಹಾಗೂ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಸುಜಯಾ ಕುಮಾರಿ ಬಿ ಡಿ ಹಾಗೂ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಧನಂಜಯ ಮೇರ್ಕಜೆ ಮುಖ್ಯ ಶಿಕ್ಷಕ ಸೋಮಶೇಖರ ಪಿ ಹಾಗೂ ಹಿರಿಯ ಉಪನ್ಯಾಸಕ ಸುರೇಶ್ ವಾಗ್ಲೆ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಜಯರಾಮ ಪಿ ಪಿ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರಾದ ಶಾಂತಿ ಎ ಕೆ ಹಾಗೂ ಉಪನ್ಯಾಸಕರು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು ಮುಖ್ಯ ಶಿಕ್ಷಕರಾದ ಸೋಮಶೇಖರ ಪಿ ಸ್ವಾಗತಿಸಿದರು ದೈಹಿಕ ಶಿಕ್ಷಣ ನಿರ್ದೇಶಕರಾದ ಶಾಂತಿ ಎ ಕೆ ವಂದಿಸಿದರು ರಾಜ್ಯಶಾಸ್ತ್ರ ಉಪನ್ಯಾಸಕ ಪದ್ಮಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ಅರಂತೋಡು : ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಉದ್ಘಾಟನೆ

















