ಬೆಳ್ಳಾರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಸುಳ್ಯ ತಾಲೂಕು ಹಾಗೂ ಬೆಳ್ಳಾರೆ ವಲಯದ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ಜಂಟಿ ಆಶ್ರಯದಲ್ಲಿ ಬೆಳ್ಳಾರೆ ವಲಯದ 9 ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನ.7ರಂದು ಅಜಪಿಲ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಲಯದ ಒಕ್ಕೂಟದ ಅಧ್ಯಕ್ಷೆ ವೇದಾ ಎಚ್. ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ನೂತನ ಒಕ್ಕೂಟಗಳ ಪದಾಧಿಕಾರಿಗಳಿಗೆ ಜವಾಬ್ದಾರಿಯನ್ನು ಹಸ್ತಾಂತರಿಸಲಾಯಿತು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ವಿಶ್ವನಾಥ ರೈ ಕಳಂಜ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ವಿಶೇಷ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಸಾಮೂಹಿಕ ಶತರುದ್ರಾಭಿಷೇಕ ಪೂಜಾ ಸಮಿತಿ ಬೆಳ್ಳಾರೆಯ ಅಧ್ಯಕ್ಷೆ ರಾಜೀವಿ ಆರ್. ರೈ ಶುಭ ಹಾರೈಸಿದರು.
ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷ ವೆಂಕಪ್ಪ ಗೌಡ, ಪೆರುವಾಜೆ ಗುತ್ತು ಸುನೀಲ್ ಕುಮಾರ್ ರೈ, ಶ್ರೀ ಜಲದುರ್ಗಾದೇವಿ ದೇವಸ್ಥಾನ ಪೆರುವಾಜೆಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಬೆಳ್ಳಾರೆ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ವಿಠಲ ದಾಸ್ ಎನ್.ಎಸ್.ಡಿ., ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ ಹಾಗೂ ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷ ಆನಂದ ಪೆರಿಯಾಣ ಉಪಸ್ಥಿತರಿದ್ದರು.
ತಾಲೂಕು ಯೋಜನಾಧಿಕಾರಿ ಮಾಧವ ಗೌಡ ಅವರು ಯೋಜನೆಯ ವಿವಿಧ ಕಾರ್ಯಕ್ರಮಗಳ ಕುರಿತು ವಿವರಿಸಿದರು. ಕಾರ್ಯಕರ್ತರ ಶ್ರಮ ಹಾಗೂ ಒಕ್ಕೂಟದ ಪದಾಧಿಕಾರಿಗಳ ಕರ್ತವ್ಯನಿಷ್ಠೆಯ ಮಹತ್ವವನ್ನು ತಿಳಿಸಿದರು. ಇದೇ ಸಂದರ್ಭದಲ್ಲಿ ಶ್ರೀ ಶತರುದ್ರಾಭಿಷೇಕ ಪೂಜೆಯ ಮಹತ್ವವನ್ನು ವಿವರಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಭಜನಾ ಪರಿಷತ್ತಿನ ಅಧ್ಯಕ್ಷರು ಮತ್ತು ಸದಸ್ಯರು, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು, ಜನಜಾಗೃತಿ ವೇದಿಕೆಯ ಸದಸ್ಯರು, ಊರಿನ ಗಣ್ಯರು, ಒಕ್ಕೂಟಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸಂಘಗಳ ಸದಸ್ಯರು ಮತ್ತು ನವಜೀವನ ಸಮಿತಿಯ ಸದಸ್ಯರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಬೆಳ್ಳಾರೆ ವಲಯದ ವತಿಯಿಂದ ಸುಳ್ಯ ಭಜನಾ ಪರಿಷತ್ತಿನ ಅಧ್ಯಕ್ಷ ವೆಂಕಟೇಶ್ ಪೈ ಬಾಚೋಡಿ, ಶ್ರೀ ಸುಬ್ರಹ್ಮಣೇಶ್ವರ ಭಜನಾ ಮಂಡಳಿ ಕಲ್ಲಗದ್ದೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲೆ-2ರ ಜಿಲ್ಲಾಧ್ಯಕ್ಷ ವಿಶ್ವನಾಥ ರೈ ಕಳಂಜ ಅವರನ್ನು ಸನ್ಮಾನಿಸಲಾಯಿತು.
ವಲಯ ಮೇಲ್ವಿಚಾರಕ ಉದಯ ಅವರು ಸ್ವಾಗತಿಸಿದರು. ಅಶ್ವಿನಿ ವರದಿ ಮಂಡಿಸಿದರು. ಜೆವಿಕೆ ಮೇಡಂ ಸುಜಾತ ಕಾರ್ಯಕ್ರಮ ನಿರೂಪಿಸಿದರು. ದಿವ್ಯಾ ವಂದಿಸಿದರು. ವಲಯದ ಸೇವಾಪ್ರತಿನಿಧಿಗಳು ಹಾಗೂ ವಿಎಲ್‌ಇಗಳು ಉಪಸ್ಥಿತರಿದ್ದರು
ಬೆಳ್ಳಾರೆ ವಲಯದ 9 ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ

















