ಅನ್ವಾರುಲ್ ಹುಧಾ ಯಂಗ್ ಮೆನ್ಸ್ ಎಸೋಸಿಯೇಶನ್ (ರಿ) ಅರಂತೋಡು ಇದರ ಸುವರ್ಣ ಮಹೋತ್ಸವ ವರ್ಷಾಚರಣೆ ಅಂಗವಾಗಿ ಭಾರತೀಯ ಅಂಚೆ ಇಲಾಖೆಯ ಸಹಯೋಗದೊಂದಿಗೆ ನವೆಂಬರ್ 14 ರಂದು ಅರಂತೋಡಿನ ಪಠೇಲ್ ಕಾಂಪ್ಲೆಕ್ಸ್ ನಲ್ಲಿ ವಿಶೇಷ ಆದಾರ್ ಶಿಬಿರವನ್ನು ಆಯೋಜಿಸಲಾಗಿದೆ. ಭಾರತೀಯ ಅಂಚೆ ಇಲಾಖೆಯ ನುರಿತ ಸಿಬ್ಬಂಧಿಗಳೊಂದಿಗೆ ಶಿಬಿರದಲ್ಲಿ ಹೊಸ ಆಧಾರ್ ಕಾರ್ಡ್ ನೋಂದಣಿ, ಹೆಸರು ಮತ್ತು ವಿಳಾಸ ತಿದ್ದುಪಡಿ, ಮೊಬೈಲ್ ಸಂಖ್ಯೆ ಬದಲಾವಣೆ ಸೇರಿದಂತೆ ಅನೇಕ ಅವಕಾಶವನ್ನು ಕಲ್ಪಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಲು ಸಂಘಟಕರು ವಿನಂತಿಸಿದ್ದಾರೆ.
ಅರಂತೋಡಿನಲ್ಲಿ ನವೆಂಬರ್ 14 ರಂದು ವಿಶೇಷ ಆದಾರ್ ಶಿಬಿರ






































