ಸುಳ್ಯ: ಅಂಬೆಟಡ್ಕದಲ್ಲಿರುವ ಸುಳ್ಯದ ಅಂಜಲಿ ಮೊಂಟೆಸ್ಸರಿ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ನ.13ರಂದು ಸಂಭ್ರಮದಿಂದ ಆಚರಿಸಲಾಯಿತು.
ಶಾಲಾ ಸಂಚಾಲಕಿ ಗೀತಾಂಜಲಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕು ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ಯಶ್ವಿತ್ ಕಾಳಮ್ಮನೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಮಕ್ಕಳ ದಿನಾಚರಣೆಯ ಮಹತ್ವವನ್ನು ತಿಳಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಪುಟಾಣಿಗಳಾದ ಪ್ರೇರಿತ್, ಮಿನ್ಝ, ಶಾದಿನ್ ಹಾಗೂ ತೀಸ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುಳ್ಯದ ಮಹಾಲಕ್ಷ್ಮಿ ಗಿಫ್ಟ್ ಆ್ಯಂಡ್ ಫ್ಯಾನ್ಸಿ ವತಿಯಿಂದ ಮಕ್ಕಳಿಗೆ ನೀಡಲಾದ ವಿಶೇಷ ಉಡುಗೊರೆಗಳನ್ನು ವಿತರಿಸಲಾಯಿತು.
ಸಭಾ ಕಾರ್ಯಕ್ರಮದ ಬಳಿಕ ಶಿಕ್ಷಕಿಯರು ಮಕ್ಕಳಿಗಾಗಿ ವಿವಿಧ ಮನರಂಜನಾ ಸ್ಪರ್ಧೆಗಳನ್ನು ಆಯೋಜಿಸಿ, ಮಕ್ಕಳ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿದರು.
ವಿದ್ಯಾರ್ಥಿನಿ ಮಿನ್ಝ ಪ್ರಾರ್ಥಿಸಿದರು. ಶಿಕ್ಷಕಿ ಫಬೀದ ಸ್ವಾಗತಿಸಿ, ಶ್ವೇತ ವಂದಿಸಿದರು. ಶಿಕ್ಷಕಿ ಸಂಗೀತ ಕಾರ್ಯಕ್ರಮ ನಿರೂಪಿಸಿದರು.






































