ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ 2026ಕ್ಕೆ ಅರ್ಜಿ ಆಹ್ವಾನ

ಸುಳ್ಯ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2026ನೇ ಸಾಲಿನ ಅಕಾಡೆಮಿ ಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರೆಭಾಷೆ ಸಂಸ್ಕೃತಿ, ಸಾಹಿತ್ಯ, ಕಲೆ ಹಾಗೂ ಅಧ್ಯಯನ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ ಮೂವರು ಸಾಧಕರನ್ನು ತಲಾ ಒಬ್ಬರಂತೆ ಆಯ್ಕೆ ಮಾಡಿ ಗೌರವ ಪ್ರಶಸ್ತಿ ನೀಡಲಾಗುವುದು.
ಸಾಧಕರು ಸ್ವತಃ ಅರ್ಜಿ ಸಲ್ಲಿಸಬಹುದು ಅಥವಾ ಅವರ ಅಭಿಮಾನಿಗಳು ಸಾಧಕರ ಹೆಸರನ್ನು ಶಿಫಾರಸು ಮಾಡಿ ಅರ್ಜಿ ಸಲ್ಲಿಸಬಹುದು. ಸಾಧಕರ ಸೇವೆ, ಸಾಧನೆ ಹಾಗೂ ಕೊಡುಗೆಗಳ ಸಂಪೂರ್ಣ ಮಾಹಿತಿಯನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ನಿಗದಿತ ಅರ್ಜಿ ನಮೂನೆಯನ್ನು ಅಕಾಡೆಮಿ ಕಚೇರಿಯಿಂದ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಇತ್ತೀಚಿನ ಭಾವಚಿತ್ರದೊಂದಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸಲು ಅವಕಾಶವಿದೆ.
ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ. ಅರ್ಜಿಯನ್ನು ಲಕೋಟೆಯ ಮೇಲೆ ‘ಗೌರವ ಪ್ರಶಸ್ತಿ 2026’ ಎಂದು ನಮೂದಿಸಿ, ಅಧ್ಯಕ್ಷರು/ರಿಜಿಸ್ಟ್ರಾರ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ ಕೃಪ ಕಟ್ಟಡ, ಮೊದಲನೇ ಮಹಡಿ, ರಾಜಾಸೀಟ್ ರಸ್ತೆ, ಮಡಿಕೇರಿ–571201 ಈ ವಿಳಾಸಕ್ಕೆ ಕಳುಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ 6362522677 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು. ಈ ಹಿಂದೆ ಗೌರವ ಪ್ರಶಸ್ತಿಗೆ ಅರ್ಜಿ ಸಲ್ಲಿಸಿದ್ದವರೂ ಮತ್ತೊಮ್ಮೆ ಹೊಸದಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಕಾಡೆಮಿ ರಿಜಿಸ್ಟ್ರಾರ್ ತಿಳಿಸಿದ್ದಾರೆ.









































































Leave a Comment

Your email address will not be published. Required fields are marked *

error: Content is protected !!
Scroll to Top