ಪತ್ರಕರ್ತ ಗಂಗಾಧರ ಮಟ್ಟಿ ಅವರಿಗೆ ಆತ್ಮೀಯ ಅಭಿನಂದನಾ ಕಾರ್ಯಕ್ರಮ

ಸುಳ್ಯದಲ್ಲಿ ಗೌರವ ಸಮರ್ಪಣೆ, ಪತ್ರಕರ್ತರ ಸ್ನೇಹಕೂಟ









































































ಸುಳ್ಯ : ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿ ಅವರು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಹಿನ್ನೆಲೆಯಲ್ಲಿ ಸುಳ್ಯದಲ್ಲಿ ಅವರಿಗೆ ಆತ್ಮೀಯ ಅಭಿನಂದನೆ ಸಲ್ಲಿಸಲಾಯಿತು.

ಪ್ರೆಸ್ ಕ್ಲಬ್ ಸುಳ್ಯ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ಸಂಯುಕ್ತ ಆಶ್ರಯದಲ್ಲಿ ನ.18ರಂದು ಸುಳ್ಯ ಪ್ರೆಸ್ ಕ್ಲಬ್ ವಠಾರದಲ್ಲಿ ಅಭಿನಂದನಾ ಸಮಾರಂಭ ಹಾಗೂ ಪತ್ರಕರ್ತರ ಸ್ನೇಹಕೂಟ ನಡೆಯಿತು.

ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಫ ಕಾರ್ಯಕ್ರಮ ಉದ್ಘಾಟಿಸಿ, ಗಂಗಾಧರ ಮಟ್ಟಿ ಅವರಿಗೆ ಪ್ರಶಸ್ತಿ ಲಭಿಸಿರುವುದು ಪತ್ರಿಕೋದ್ಯಮ ಕ್ಷೇತ್ರಕ್ಕೆ ಹೆಮ್ಮೆಯ ಸಂಗತಿ ಎಂದು ಶುಭ ಹಾರೈಸಿದರು. ಎಪಿಎಂಸಿ ಮಾಜಿ ಅಧ್ಯಕ್ಷ ಹಾಗೂ ನ್ಯಾಯವಾದಿ ಎನ್. ಜಯಪ್ರಕಾಶ್ ರೈ ಅವರು ಗಂಗಾಧರ ಮಟ್ಟಿ ಅವರನ್ನು ಸನ್ಮಾನಿಸಿ ಗೌರವಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸುಳ್ಯ ಪೊಲೀಸ್ ಉಪನಿರೀಕ್ಷಕ ಉದಯರವಿ ವೈ.ಎಂ. ಶುಭ ಹಾರೈಸಿದರು. ಪ್ರೆಸ್ ಕ್ಲಬ್ ಗೌರವಾಧ್ಯಕ್ಷ ಹಾಗೂ ಸುದ್ದಿ ಬಿಡುಗಡೆಯ ಸಂಪಾದಕ ಹರೀಶ್ ಬಂಟ್ವಾಳ್ ಅಭಿನಂದನಾ ನುಡಿಗಳನ್ನಾಡಿದರು.

ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಗಣೇಶ ಅಮಿನಗಡ ಅವರು ರಚಿಸಿರುವ ‘ಪತ್ರಕರ್ತನ ಅನುಭವಗಳು’ ಕೃತಿಯನ್ನು ಬಿಡುಗಡೆಗೊಳಿಸಲಾಯಿತು. ಪುಸ್ತಕದ ಮೂಲಕ ಪತ್ರಿಕೋದ್ಯಮ ಕ್ಷೇತ್ರದ ಅನುಭವಗಳು ಹಾಗೂ ವೃತ್ತಿಜೀವನದ ಸವಾಲುಗಳು ಓದುಗರಿಗೆ ಪರಿಚಯವಾಗಲಿ ಎಂದು ಆಶಿಸಲಾಯಿತು.

ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿ ಶಮ್ಯಾ ಡಿ. ಅವರು ಹಿಂದುಸ್ತಾನಿ ಬಾನ್ಸುರಿ ಕೊಳಲು ವಾದನದ ಮೂಲಕ ಸಂಗೀತದ ಸೊಬಗು ಮೂಡಿಸಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸುಳ್ಯ ತಾಲೂಕು ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ ಸ್ವಾಗತಿಸಿದರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ಯಶ್ವಿತ್ ಕಾಳಂಮನೆ ವಂದಿಸಿದರು. ಪತ್ರಕರ್ತ ಶಿವಪ್ರಸಾದ್ ಆಲೆಟ್ಟಿ ಪ್ರಾರ್ಥಿಸಿದರು. ಗಂಗಾಧರ ಕಲ್ಲಪಳ್ಳಿ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದ ಅಂತ್ಯದಲ್ಲಿ ಪತ್ರಕರ್ತ ಮಿತ್ರರು ಹಾಗೂ ಅಭಿಮಾನಿ ಸ್ನೇಹಿತರು ಗಂಗಾಧರ ಮಟ್ಟಿ ಮತ್ತು ಅವರ ಪತ್ನಿಯನ್ನು ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಿದರು. ಪತ್ರಕರ್ತರ ವೃತ್ತಿಬಾಂಧವ್ಯ, ಸ್ನೇಹ ಮತ್ತು ಸೌಹಾರ್ದಕ್ಕೆ ಈ ಸಮಾರಂಭ ಸಾಕ್ಷಿಯಾಯಿತು.

Leave a Comment

Your email address will not be published. Required fields are marked *

error: Content is protected !!
Scroll to Top