ಚೆನ್ನಕೇಶವ ದೇವಳದ ಬಳಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ: ಸೆರೆಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

ಸುಳ್ಯ, ನ. 23: ಸುಳ್ಯದ ಚೆನ್ನಕೇಶವ ದೇವಳದ ಸಮೀಪ ಬೃಹತ್ ಗಾತ್ರದ ಹೆಬ್ಬಾವೊಂದು ಪ್ರತ್ಯಕ್ಷಗೊಂಡ ಘಟನೆ ನ. 23ರಂದು ನಡೆದಿದೆ.









































































ದೇವಳದ ಸಮೀಪ ನಿಲ್ಲಿಸಲಾಗಿದ್ದ ಲಾರಿಯೊಂದರ ಅಡಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಕಂಡುಬಂದಿದೆ ಎನ್ನಲಾಗಿದೆ. ಲಾರಿಯ ಅಡಿಯಲ್ಲಿ ಹೆಬ್ಬಾವು ಇರುವುದನ್ನು ಗಮನಿಸಿದ ಸ್ಥಳೀಯರು ಆತಂಕಗೊಂಡಿದ್ದು, ಕೆಲಕಾಲ ಸ್ಥಳದಲ್ಲಿ ಕುತೂಹಲದ ವಾತಾವರಣ ನಿರ್ಮಾಣವಾಗಿತ್ತು.

ತಕ್ಷಣವೇ ಹೆಬ್ಬಾವನ್ನು ಹಿಡಿಯುವ ಕಾರ್ಯಾಚರಣೆ ನಡೆಸಲಾಗಿದ್ದು, ಹೆಬ್ಬಾವನ್ನು ಸುರಕ್ಷಿತವಾಗಿ ಸೆರೆಹಿಡಿಯಲಾಗಿದೆ. ಬಳಿಕ ಅದನ್ನು ಜನವಸತಿ ಪ್ರದೇಶದಿಂದ ದೂರದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಹೆಬ್ಬಾವು ಪ್ರತ್ಯಕ್ಷಗೊಂಡ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿದ್ದು, ಯಾವುದೇ ಅಪಾಯ ಸಂಭವಿಸದೆ ಹೆಬ್ಬಾವನ್ನು ಸುರಕ್ಷಿತವಾಗಿ ಸ್ಥಳಾಂತರಿಸಿರುವುದರಿಂದ ನಿಟ್ಟುಸಿರು ಬಿಡುವಂತಾಯಿತು.

Leave a Comment

Your email address will not be published. Required fields are marked *

error: Content is protected !!
Scroll to Top