ಸುಳ್ಯ: ಸುಳ್ಯ ನಗರದ ಹಳೆಗೇಟ್ ನಿವಾಸಿ ಹಾಗೂ ಸಾಮಾಜಿಕ ಕಾರ್ಯಕರ್ತ ಡಿ.ಎಂ. ಶಾರಿಕ್ ಅವರು ನಿಧನರಾಗಿದ್ದಾರೆ.
ಮಾಹಿತಿ ಹಕ್ಕು ಕಾಯ್ದೆ (RTI) ಮೂಲಕ ಸಾರ್ವಜನಿಕ ಸಮಸ್ಯೆಗಳನ್ನು ಬೆಳಕಿಗೆ ತರುವುದರ ಜೊತೆಗೆ, ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಶಾರಿಕ್ ಅವರು ಜನಪರ ಹೋರಾಟಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಸಾಮಾಜಿಕ ಕಳಕಳಿಯೊಂದಿಗೆ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದ ಅವರ ನಿಧನದ ಸುದ್ದಿ ತಿಳಿದು ಕುಟುಂಬಸ್ಥರು, ಬಂಧುಮಿತ್ರರು ಹಾಗೂ ಹಿತೈಷಿಗಳಲ್ಲಿ ದುಃಖದ ಛಾಯೆ ಆವರಿಸಿದೆ.
ಅವರ ನಿಧನಕ್ಕೆ ಹಲವು ಮಂದಿ ಸಂತಾಪ ಸೂಚಿಸಿದ್ದಾರೆ
ಸಾಮಾಜಿಕ ಕಾರ್ಯಕರ್ತ ಡಿ.ಎಂ. ಶಾರಿಕ್ ನಿಧನ








































