ತೊಡಿಕಾನ : ಸುಳ್ಯ ತಾಲೂಕಿನ ತೊಡಿಕಾನದಲ್ಲಿರುವ ಸುಳ್ಯ ಸೀಮೆ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಧನುಪೂಜೆ ಪ್ರಯುಕ್ತ ಪೂರ್ವಭಾವಿ ಸಭೆಯನ್ನು ನವೆಂಬರ್ 29ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ ದೇವಸ್ಥಾನದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಧನುಪೂಜೆ ಕಾರ್ಯಕ್ರಮದ ಸಿದ್ಧತೆಗಳು ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಈ ಸಭೆಗೆ ಸಂಬಂಧಪಟ್ಟವರು ಹಾಗೂ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಮತ್ತು ಸೂಚನೆಗಳನ್ನು ನೀಡುವಂತೆ ಜೀರ್ಣೋದ್ಧಾರ ಸಮಿತಿ ಹಾಗೂ ವ್ಯವಸ್ಥಾಪನಾ ಸಮಿತಿ ಮನವಿ ಮಾಡಿದೆ.
ಇದೇ ಸಂದರ್ಭದಲ್ಲಿ ಧನುಪೂಜೆಯ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಗುವುದು ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.








































