ಅರಂತೋಡಿನಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರ: 300 ಮಂದಿಗೆ ಪ್ರಯೋಜನ

ಅರಂತೋಡು: ಪಾಪ್ಯುಲರ್ ಎಜ್ಯುಕೇಶನ್ ಸೊಸೈಟಿ ಅರಂತೋಡು ಮತ್ತು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ‘ಎಸ್‌ಎಸ್‌ಎಲ್‌ಸಿ ನಂತರ ಏನು?’ ಎಂಬ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.











































































ಕಾರ್ಯಕ್ರಮವನ್ನು ವಿಶ್ರಾಂತ ಪ್ರಾಂಶುಪಾಲ ಕೆ.ಆರ್. ಗಂಗಾಧರ್ ಉದ್ಘಾಟಿಸಿದರು. ಕನಕದಾಸರ ಜಯಂತಿ ಪ್ರಯುಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಅರಂತೋಡು ಪಾಪ್ಯುಲರ್ ಏಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಪಿ.ಬಿ. ದಿವಾಕರ್ ರೈ ಅಧ್ಯಕ್ಷತೆ ವಹಿಸಿದ್ದರು. ಸಂಚಾಲಕ ಎ.ಸಿ. ವಸಂತ್ ಸ್ವಾಗತಿಸಿ, ಉಪಾಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಪ್ರಸ್ತಾವನೆಗೈದರು. ಕಾರ್ಯದರ್ಶಿ ಎ. ಅಬ್ದುಲ್ಲ ವಂದಿಸಿದರು.

ಬೆಂಗಳೂರಿನ ಕ್ರೋಮ್ ಪಿಯು ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕರು ಹಾಗೂ ವೃತ್ತಿ ಮಾರ್ಗದರ್ಶನ ತಜ್ಞ ವಿ.ಎಲ್. ಪಾಂಡುರಂಗ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗಗಳಲ್ಲಿನ ಉನ್ನತ ಶಿಕ್ಷಣದ ಅವಕಾಶಗಳು, ವಿವಿಧ ವೃತ್ತಿ ಆಯ್ಕೆಗಳು, ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ವಿದ್ಯಾರ್ಥಿವೇತನಗಳ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿಗಳು ತಮ್ಮ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ಭವಿಷ್ಯದ ಶಿಕ್ಷಣವನ್ನು ಆಯ್ಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.

ಸುಮಾರು 25 ವರ್ಷಗಳ ಬೋಧನಾ ಅನುಭವ ಹೊಂದಿರುವ ಪಾಂಡುರಂಗ ಅವರು 200ಕ್ಕೂ ಹೆಚ್ಚು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮಗಳ ಮೂಲಕ ಒಂದು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದು, India Book of Records‌ನ IBR Achiever ಮಾನ್ಯತೆ ಪಡೆದಿದ್ದಾರೆ.

ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಸುಳ್ಯ ತಾಲೂಕಿನ 20ಕ್ಕೂ ಹೆಚ್ಚು ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ಸೇರಿದಂತೆ ಸುಮಾರು 300 ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಂಡರು. ಭಾಗವಹಿಸಿದ ಎಲ್ಲರಿಗೂ ಉಪಹಾರ ಹಾಗೂ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

ಕಾರ್ಯಕ್ರಮದ ನಿರೂಪಣೆಯನ್ನು ಇತಿಹಾಸ ಉಪನ್ಯಾಸಕ ಮೋಹನ್ ಚಂದ್ರ ನಿರ್ವಹಿಸಿದರು. ಸಂಸ್ಥೆಯ ಪ್ರಾಂಶುಪಾಲ ರಮೇಶ್ ಎಸ್. ಹಾಗೂ ಮುಖ್ಯೋಪಾಧ್ಯಾಯ ಸೋಮಶೇಖರ್ ಮಾರ್ಗದರ್ಶನ ನೀಡಿದರು. ಶಿಕ್ಷಕ ವೃಂದ, ಉಪನ್ಯಾಸಕರು ಹಾಗೂ ಸಿಬ್ಬಂದಿ ಸಹಕರಿಸಿದರು.

Leave a Comment

Your email address will not be published. Required fields are marked *

error: Content is protected !!
Scroll to Top