ಕುಮಾರಧಾರ ನದಿಗೆ ವ್ಯಕ್ತಿಯೊಬ್ಬ ಹಾರಿರುವ ಶಂಕೆ ಮೂಡಿದೆ
ಕಡಬ ತಾಲೂಕಿನ ಕೋಡಿಂಬಾಳ ಸಮೀಪದ ನೆಕ್ಕಿಲಾಡಿ ಗ್ರಾಮದ ಕೋರಿಯರ್ ಎಂಬಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ.ಸಕಲೇಶಪುರ ಬಾಲಗದ್ದೆ ನಿವಾಸಿ ಧರ್ಮಯ್ಯ (40) ಎಂಬವರು ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ ಎನ್ನಲಾಗಿದೆ. ನದಿ ಬದಿಯಲ್ಲಿ ಧರ್ಮಯ್ಯ ಅವರ ಶೂ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶೌರ್ಯ ತಂಡದ ಸದಸ್ಯರಿಂದ ನದಿಯಲ್ಲಿ ಹುಡುಕಾಟ ನಡೆಯುತ್ತಿದೆ. ಧರ್ಮಯ್ಯ ರಬ್ಬರ್ ಕಟ್ಟಿಂಗ್ ಕೆಲಸಕ್ಕೆ ಸಕಲೇಶಪುರದಿಂದ ಕೋಡಿಂಬಾಳಕ್ಕೆ ಬಂದಿದ್ದ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.