ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ಜೂ. 30 ರೊಳಗೆ ಶರಣಾಗದೇ ಇದ್ದಲ್ಲಿ ಅವರ ಮನೆಯನ್ನು ಜಪ್ತಿ ಮಾಡಲಾಗುವುದೆಂದು ಸುಳ್ಯ ನಗರದಲ್ಲಿ ಧ್ವನಿವರ್ಧಕದ ಮೂಲಕ ಘೋಷಣೆ ಮಾಡಲಾಗುತ್ತಿದೆ.
ಎನ್ಐಎ ಅಧಿಕಾರಿಗಳು ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನ ನೀಡಲಾಗುವುದು ಸಾರ್ವಜನಿಕರಿಗೆ ತಿಳಿಸಲಾಗುತ್ತಿದೆ.
ಸುಳ್ಯದ ಕಲ್ಲುಮುಟ್ಟುನಲ್ಲಿ ವಾಸವಿದ್ದ ಆರೋಪಿ ಉಮ್ಮರ್ ಫಾರೂಕ್ ಅವರ ಮನೆಗೂ ಹೋಗಿ ನ್ಯಾಯಾಲಯದ ಆದೇಶ ಪ್ರತಿಯನ್ನು ಅಂಟಿಸಿ ಬಂದಿದ್ದಾರೆ. ನಿನ್ನೆ ಬೆಳ್ಳಾರೆಯಲ್ಲಿಯೂ ಧ್ವನಿವರ್ಧಕದ ಮೂಲಕ ಎನ್ಐಎ ನ್ಯಾಯಾಲಯದ ಆದೇಶವನ್ನು ಆರೋಪಿ ಮುಸ್ತಫರವರ ಮನೆಗೂ ಹೋಗಿ ಆದೇಶ ಪ್ರತಿಯನ್ನು ಅಂಟಿಸಿ ಬಂದಿದ್ದಾರೆಂದು ತಿಳಿದುಬಂದಿದೆ.