ಯುವಕನೋರ್ವ ಜೀವನದಲ್ಲಿ ನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಮರ್ಧಾಳದಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ನಿವಾಸಿ ದಿ. ಸಂಜೀವ ರೈ ಎಂಬವರ ಪುತ್ರ ರಘುನಾಥ ರೈ (38) ಎಂದು ಗುರುತಿಸಲಾಗಿದೆ.ಗುರುವಾರದಂದು ಸಂಜೆ ವೇಳೆಗೆ ತನ್ನ ಮನೆಯಲ್ಲಿದ್ದ ರಘುನಾಥ್ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ.ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಯಿತು. ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ