ಸುರತ್ಕಲ್ ಸಮೀಪ ಮಂಗಳವಾರ ತಡರಾತ್ರಿ ಸಮುದ್ರ ತೀರದಲ್ಲಿ ಭಾರಿ ಸುಂಟರಗಾಳಿಗೆ ಕುಲಾಯಿ ಪ್ರದೇಶದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಸಂತೋಷ್ ಎಂಬವರು ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದನ್ನು ತಿಳಿಯದೆ ಅದನ್ನ ತುಳಿದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.