ದ.ಕ ಜಿಲ್ಲೆಯಲ್ಲಿ ಕಳೆದ ಎರಡು ದಿವಸಗಳಿಂದ ಭಾರೀಮಳೆ ಸುರಿಯುತ್ತಿದ್ದು ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇರ್ದೇ ಗ್ರಾಮದ ಚೆಲ್ಯಡ್ಕ ಮುಳುಗು ಸೇತುವೆ ಜು.6ರಂದು ಮುಂಜಾನೆ ಮುಳುಗಡೆಯಾಗಿದೆ.ಚೆಲ್ಯಡ್ಕ ಸೇತುವೆ ಮುಳುಗಡೆಗೊಂಡ ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡಿದ್ದು, ವಾಹನಗಳು ಸೆಂಟ್ಯಾರು ಪಾಣಾಜೆ ಲೋಕೋಪಯೋಗಿ ರಸ್ತೆಯ ಮೂಲಕ ಸಂಚರಿಸುತ್ತಿದೆ.ಇನ್ನು ಮುಳುಗು ಸೇತುವೆ ಎಂದು ಪ್ರಖ್ಯಾತಿ ಪಡೆದಿರುವ ಚೆಲ್ಯಡ್ಕ ಸೇತುವೆ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಪ್ರಥಮ ಬಾರಿಗೆ ಮುಳುಗಡೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇದರಿಂದ ಸ್ಥಳೀಯರು ಸುತ್ತು ಬಳಸಿ ಪ್ರಯಾಣಿಸಬೇಕಾದ ಅನಿವಾರ್ಯತೆ ಎದುರಾಗಿದೆ.