ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದಿಂದ ನಾಪತ್ತೆಯಾಗಿದ್ದಜೈನ ಮುನಿಗಳಾದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಶವವಾಗಿ ಪತ್ತೆಯಾಗಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದಿದ್ದ ಪೊಲೀಸರು ವಿಚಾರಣೆ ನಡೆಸಿದಾಗ ಹತ್ಯೆ ಮಾಡಿರುವುದಾಗಿ ಬಾಯ್ದಿಟ್ಟಿದ್ದಾರೆ. ಆದರೆ ಶವ ಎಲ್ಲಿದೆ ಎಂಬುದನ್ನು ನಿಖರವಾಗಿ ಹೇಳದೆ ದಾರಿತಪ್ಪಿಸುವ ಕಾರ್ಯ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಜೊತೆಗೆ ಅವರ ಹತ್ಯೆಗೆ ಕಾರಣಗಳು ಇನ್ನಷ್ಟೇ ತಿಳಿದುಬರಬೇಕಿದೆ.