ಜು.17ರಿಂದ ಅಗ್ನಿಪಥ್ ಸೇನಾ ನೇಮಕಾತಿ


ಉಡುಪಿ ಜಿಲ್ಲೆಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ಭಾರತೀಯ ಸೇನೆಯ ಅಗ್ನಿಪಥ್‌ ಸೇನಾ ನೇಮ ಕಾತಿ ರ್ಯಾಲಿಯು ಜು. 17ರಿಂದ 25ರ ವರೆಗೆ ನಡೆಯಲಿದ್ದು, ಇದಕ್ಕಾಗಿ ಎಲ್ಲ ರೀತಿಯ ಅಗತ್ಯ ಸಿದ್ಧತೆಗಳನ್ನು ಕೈಗೊಂಡು, ಅಭ್ಯರ್ಥಿಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್‌. ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ರ್ಯಾಲಿ ಕುರಿತ ಪೂರ್ವ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರ್ಯಾಲಿಯಲ್ಲಿ ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. 6,800ಕ್ಕೂ ಅಧಿಕ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದರು.

Ad Widget . Ad Widget . Ad Widget . . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top