ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನಲ್ಲಿ ಇಂದು (ಜುಲೈ 18) ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಮುದಾಸೀರ್, ಮುಜಾಯಿದ್, ಅಹ್ಮದ್ ಪಾಷಾ ಮೃತರು. ಇವರು ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುತ್ತಿದ್ದಾಗ ಕಂಪ್ಲಾಪುರ ಬಳಿ ಮುಂಜಾನೆ 4:30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂವರಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು





































































