ಪತ್ನಿಯ ಶೀಲ ಶಂಕಿಸಿ ಪತಿಯೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾಸನದ ಹೊಳೆನರಸೀಪುರ ತಾಲೂಕಿನ ಎಸ್.ಅಂಕನಹಳ್ಳಿ ಬಳಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಅಂಬಿಕಾ (28) ಕೊಲೆಯಾದ ಮೃತ ದುರ್ದೈವಿ. ಪತಿ ಚಂದ್ರಮೌಳಿ ಕೊಲೆ ಮಾಡಿದ ಆರೋಪಿ ಎಂದು ತಿಳಿದುಬಂದಿದೆ.ಪತಿ ಚಂದ್ರಮೌಳಿಯು ಕೆಲಸಕ್ಕೆ ಹೋಗಿದ್ದ ಪತ್ನಿಯನ್ನು ಫೋನ್ ಮಾಡಿ ಕರೆಸಿಕೊಂಡಿದ್ದ. ಬಳಿಕ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.