ಸುಳ್ಯ ಪಾಣತ್ತೂರು ಸಂಪರ್ಕ ಕಡಿತ
ಸುಳ್ಯದಿಂದ ಕಲ್ಲಪ್ಪಳ್ಳಿ ಮೂಲಕ ಕೇರಳದ ಪಾಣತ್ತೂರು ಸಂಪರ್ಕಿಸುವ ಅಂತರ್ ರಾಜ್ಯ ರಸ್ತೆಯಲ್ಲಿ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ರಸ್ತೆ ತಡೆ ಉಂಟಾಗಿರುವ ಘಟನೆ ವರದಿಯಾಗಿದೆ.ರಸ್ತೆಯ ಮೇಲ್ಭಾಗದ ಗುಡ್ಡದಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು ಗುಡ್ಡ ಇನ್ನಷ್ಟು ಕುಸಿಯುವ ಆತಂಕ ಎದುರಾಗಿದೆ.ಸುಳ್ಯದಿಂದ ಸಂಪರ್ಕಿಸುವ ಈ ರಸ್ತೆಯಲ್ಲಿ ವಾಹನ ಸಂಚಾರ, ಪಾದಚಾರಿಗಳ ಸಂಚಾರ ಸಂಪೂರ್ಣ ನಿಷೇಧ ಮಾಡಲಾಗಿದ್ದು , ಪೊಲೀಸ್ ಬ್ಯಾರಿಕೇಡ್ ಅಳವಡಿಸಿ ರಸ್ತೆ ಬಂದ್ ಮಾಡಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಬಾಟೋಳಿ ಭಾಗದಲ್ಲಿ ಬಾರಿ ಪ್ರಮಾಣದಲ್ಲಿಗುಡ್ಡ ಜರಿದು ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು . ಸತತ ಕೆಲಸಗಳಿಂದ ಮಣ್ಣು ತೆರವು ಕಾರ್ಯಚರಣೆ ಮಾಡಲಾಗಿತ್ತು ಇಂದು ಅದೇ ಜಾಗದಲ್ಲಿ ಮತ್ತೆ ಗುಡ್ಡಜರಿದು ರಸ್ತೆಗೆ ಬಿದ್ದಿಮೇಲ್ಭಾಗದಲ್ಲಿ ಬಿರುಕುಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಂಪೂರ್ಣವಾಗಿ ವಾಹನ ಸಂಚಾರ ನಿಷೇಧಿಸಲಾಗಿದೆ.