ಸುಳ್ಯ: ಚಲಿಸುತ್ತಿದ್ದ ಬಸ್ಸು ಹತ್ತಲು ಯತ್ನಿಸಿದ ವ್ಯಕ್ತಿಯೊಬ್ಬರು ರಸ್ತೆಗೆ ಎಸೆಯಲ್ಪಟ್ಡು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟ ವ್ಯಕ್ತಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಆಲೆಟ್ಟಿ ಗ್ರಾಮದ ಕೂಳಿಯಡ್ಕ ಕರುಣಾಕರ ಮೃತಪಟ್ಟ ದುರ್ದೈವಿ. ಸುಳ್ಯ ಆಲೆಟ್ಟಿ ಕ್ರಾಸ್ ಬಳಿಯಲ್ಲಿ ಶನಿವಾರ ಸಂಜೆ ಖಾಸಗಿ ಬಸ್ಸು ಹತ್ತಲು ಅವರು ಹೋದಾಗ ಬಸ್ಸಿನ ಬಾಗಿಲು ತಳ್ಳಲ್ಪಟ್ಟು ರಸ್ತೆಗೆ ಆಯತಪ್ಪಿ ಬಿದ್ದರೆನ್ನಲಾಗಿದೆ. ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯರು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿದರು.ಮನೆಯಲ್ಲೆ ಮುಂಜಾನೆ ಸಮಸ್ಯೆ ಉಲ್ಬಣವಾದ ಹಿನ್ನಲೆಯಲ್ಲಿ ಅವರನ್ನು ಚಿಕಿತ್ಸೆಗಾಗಿ ಮತ್ತೆ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತರಲಾಯಿತು. ವೈದ್ಯರು ವ್ಯಕ್ತಿಯನ್ನು ಮಂಗಳೂರಿಗೆ ಕರೆದೊಯ್ಯುಲು ಸೂಚಿಸಿದರು. ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಸಾವನ್ನಪಿರುವುದಾಗಿ ತಿಳಿದು ಬಂದಿದೆ.