ಸುಳ್ಯ : ನಾಡಿನ ಶಾಲೆಗಳನ್ನು ಉಳಿಸಿ ಬೆಳೆಸಿ ಮುಂದಿನ ತಲೆ ಮಾರಿಗೆ ಹಸ್ತಾಂತರ ಮಾಡುವ ಜವಾಬ್ದಾರಿ ಪ್ರತಿಯೊಬ್ಬರ ಮೇಲೆ ಇದೆ ಎಂದು ಮಾಜಿ ಸಚಿವ ಹಾಗೂ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಎಸ್.ಅಂಗಾರ ಹೇಳಿದ್ದಾರೆ.
ಅವರು ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಸಂಭ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಊರಿನ ಜನರು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಭಾವನೆಯಿಂದ ಹಿರಿಯರು ಊರಿನಲ್ಲಿ ಶಾಲೆಗಳನ್ನು ಸ್ಥಾಪಿಸಿದ್ದಾರೆ.ಆ ಶಾಲೆಯಿಂದ ಶಿಕ್ಷಣ ಪಡೆದು ಹಲವು ಮಂದಿಯ ಬದುಕು
ಬೆಳಗಿದೆ. ನಮ್ಮ ಭಾವನೆಗಳನ್ನು ಪೋಷಿಸಬೇಕು ಆ ಮೂಲಕ ನಾಡಿನ ಶೈಕ್ಷಣಿಕ ಹಾಗು ಸಾಂಸ್ಕೃತಿಕ ಪರಂಪರೆಯನ್ನು ಉಳಿಸಬೇಕು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಶಾಲಾ ಸಂಚಾಲಕ ರಾಧಕ್ರಷ್ಣ ಬೊಳ್ಳುರು ಮಾತನಾಡಿ ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರನ್ನು ನೆನಪಿಸಿಕೊಂಡು ಶಾಲೆ ನಡೆದು ಬಂದ ದಾರಿಯನ್ನು ವಿವರಿಸಿದರು.
ಸಮಾರೋಪ ಸಮಾರಂಭದಲ್ಲಿ ಗುರುವಂದನ ಕಾರ್ಯಕ್ರಮ ನಡೆಯಿತು. ನಿವೃತ್ತ ಶಿಕ್ಷಕರಾದ ಎಂ.ಟಿ.ತಿರುಮಲೇಶ್ವರ ಭಟ್, ಲಕ್ಷ್ಮೀಶ ಚೊಕ್ಕಾಡಿ, ಚಂದ್ರಶೇಖರ ಭಟ್ ಕೊಡಪ್ಪಾಲ, ರಾಜೇಶ್ವರಿ ಸಿ.ವಿ, ಸುಬ್ರಾಯ ಓಣಿಯಡ್ಕ, ಚಂದ್ರಶೇಖರ ಮೂಕಮಲೆ, ಜನಾರ್ಧನ ನಾಯರ್‌ಕಲ್ಲು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.ಹಿಂದೆ ಶಾಲೆಯಲ್ಲಿ ಸೇವೆ ಸಲ್ಲಿಸಿದ ಗೌರವ ಶಿಕ್ಷಕರನ್ನು ಗೌರವಿಸಲಾಯಿತು. ರಾಜ್ಯ ಮಟ್ಟದಲ್ಲಿ ಪ್ರತಿನಿಧಿಸಿದ ಶಾಲೆಯ ಕ್ರೀಡಾಪಟುಗಳನ್ನು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ರಾಜ್ಯ ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಸುವರ್ಣ ಮಹೋತ್ಸವ ಅಭಿವೃದ್ಧಿ ಕಾಮಗಾರಿಯಲ್ಲಿ ಕಾರ್ಯ ನಿರ್ವಹಿಸಿದವರನ್ನು ಸನ್ಮಾನಿಸಲಾಯಿತು.
ಮುಖ್ಯ ಅತಿಥಿಯಾಗಿ ಸಿಡಿಪಿಒ ಶೈಲಜಾ ಕುಕ್ಕುಜಡ್ಕ, ಹಿರಿಯ ವೈದ್ಯರಾದ ಡಾ.ಗೋಪಾಲಕೃಷ್ಣ ಸಾಪ್ಟವೇರ್ ಸ್ಕ್ಯಾನ್‌ರೇ ಟೆಕ್ನಾಲಜಿಯ ನಿವೃತ್ತ ಜನರಲ್ ಮ್ಯಾನೇಜರ್ ತಿರುಮಲೇಶ್ವರ ಎಚ್, ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಕೇಶವ ಕರ್ಮಾಜೆ, ಅಮರಮುಡ್ನೂರು ಗ್ರಾಮ ಪಂಚಾಯತ್ ಸದಸ್ಯೆ ದಿವ್ಯಾ ಮಡಪ್ಪಾಡಿ ಭಾಗವಹಿಸಿದ್ದರು.
ಉಪಾಧ್ಯಕ್ಷ ಅಣ್ಣಾಜಿ ಗೌಡ ಪೈಲೂರು, ಕಾರ್ಯದರ್ಶಿ ತೇಜಸ್ವಿ ಕಡಪಳ, ಖಜಾಂಜಿ ಹರ್ಷವರ್ಧನ ಬೊಳ್ಳೂರು, ಜೊತೆ ಕಾರ್ಯದರ್ಶಿ ತಿಮ್ಮಪ್ಪ ಗೌಡ ಕೊಂಡೆಬಾಯಿ, ನಿರ್ದೇಶಕರಾದ ಸತ್ಯಪ್ರಸಾದ್ ಪುಳಿಮಾರಡ್ಕ, ಆನಂದ ಗೌಡ ಚಿಲ್ಪಾರು,
ಜಗನ್ನಾಥ ಹಿರಿಯಡ್ಕ, ಯಂ.ಎ.ಸುಪ್ರೀತ್ ಮೋಂಟಡ್ಕ, ಭಾಸ್ಕರ ಎಂ.ಆರ್.ಮೇರ್ಕಜೆ, ವೆಂಕಟ್ರಮಣ ಗೌಡ ಇಟ್ಟಿಗುಂಡಿ, ಡಾ. ಸನತ್ ಕುಮಾರ್ ಡಿ.ಜಿ, ದೇರಾಜೆ, ಅರುಣ ನಾಯರ್‌ಕಲ್ಲು, ಪರಮೇಶ್ವರ ಗೌಡ ಪಡ್ಡು,
ಚೊಕ್ಕಾಡಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಸಂಕೀರ್ಣ ಚೊಕ್ಕಾಡಿ, ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿ ಚೈತ್ರ ಯು. ಪ್ರೌಢ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ವಿಶ್ವನಾಥ ಮೂಕಮಲೆ, ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಪ್ರಕಾಶ್ ಮಾಯಿಪಡ್ಕ, ಶಾಲಾ ವಿದ್ಯಾರ್ಥಿ ನಾಯಕ ಅಭಿಜಿತ್ ಕೆ, ವಿದ್ಯಾರ್ಥಿ ನಾಯಕಿ ಹಸ್ತಾ ಕೆ. ಎಂ. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಸಂಚಾಲಕರಾದ ರಾಧಾಕೃಷ್ಣ ಬೊಳ್ಳೂರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಕಾರ್ಯದರ್ಶಿ ತೇಜಸ್ವಿ ಕಡಪಳ ವಂದಿಸಿದರು. ನಾರಾಯಣ ಮಾಸ್ಟರ್ ಬೊಳ್ಳೂರು ಹಾಗೂ ಶಶಿಕಾಂತ್ ಕಾರ್ಯಕ್ರಮ ನಿರೂಪಿಸಿದರು.