ಸಂಪಾಜೆ : ವಸತಿ ನಿಲಯದಿಂದ ಶಾಲೆಗೆ ಹೋಗುತ್ತಿದ್ದ ಬಾಲಕನೋರ್ವನ ಮರ್ಮಾಂಗವನ್ನು ಇಬ್ಬರು ವಿದ್ಯಾರ್ಥಿಗಳು ಹಿಡಿದೆಳೆದ ಪರಿಣಾಮವಾಗಿ ಮರ್ಮಾಂಗ ಊದಿಕೊಂಡು ಬಾಲಕ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ವರದಿಯಾಗಿದೆ.
ದ.ಕ. ಸಂಪಾಜೆಯ ಆಲಡ್ಕ ನಿವಾಸಿಯಾಗಿರುವ 12 ವರ್ಷದ ಬಾಲಕ ಕಳೆದ ಕೆಲ ಸಮಯಗಳಿಂದ ಕೊಡಗು ಸಂಪಾಜೆಯ ವಸತಿ ನಿಲಯದಲ್ಲಿ ಶಾಲೆಗೆ ಹೋಗುತ್ತಿದ್ದು
ಸೆ.14ರಂದು ರಾತ್ರಿ ವಸತಿ ನಿಲಯದಲ್ಲಿ ಇಬ್ಬರು ಸಹಪಾಠಿ
ವಿದ್ಯಾರ್ಥಿಗಳು ಬಾಲಕನ ಮರ್ಮಾಂಗವನ್ನು ಹಿಡಿದೆಳೆದಿದ್ದರು.
ಬಳಿಕ ಬಾಲಕ ಮೂತ್ರ ವಿಸರ್ಜನೆ ಮಾಡುವ ವೇಳೆ ನೋವಾಗುತ್ತಿದ್ದ ಪರಿಣಾಮ ಮನಗೆ ಬಂದಿದ್ದನೆನ್ನಲಾಗಿದೆ.
ಬಾಲಕ ಮರ್ಮಾಂಗ ಊದಿಕೊಂಡಿದ್ದರಿಂದ
ತಾಯಿಯೊಡನೆ ವಿಷಯ ತಿಳಿಸಿದನೆನ್ನಲಾಗಿದೆ.ಬಾಲಕನಿಗೆ ಸ್ಥಳೀಯವಾಗಿ ಚಿಕಿತ್ಸೆ ಕೊಡಿಸಿ ಈಗ ಮಂಗಳೂರಿನ ವೆನ್ಹಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಇದೀಗ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು ಬಾಲಕ ಚೇತರಿಸಿಕೊಳ್ಳುತ್ತಿದ್ದಾನೆ ಎಂದು ತಿಳಿದು ಬಂದಿದೆ.