ಅರಂತೋಡು : ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಅಡ್ಕಬಳೆ ಸಮೀಪ ಕೃಷಿಕರ ತೋಟಗಳಿಗೆ ಕಾಡಾನೆಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಕೃಷಿ ನಾಶಗೊಂಡ ಘಟನೆ ವರದಿಯಾಗಿದೆ.
ಗುರುವಾರ ರಾತ್ರಿ ಅಡ್ಕಬಳೆಯ ಗಂಗಾಧರ ಗೌಡ, ಲೀಲಾವತಿ ಅಡ್ಕಬಳೆ ಅವರ ಕೃಷಿ ತೋಟಕ್ಕೆ ದಾಳಿ ನಡೆಸಿ, ತೆಂಗು, ಅಡಿಕೆ ಹಾಗೂ ಬಾಳೆ ಕೃಷಿ ನಾಶಪಡಿಸಿರುವುದಾಗಿ ತಿಳಿದುಬಂದಿದೆ.ಅರಣ್ಯ ಇಲಾಖೆಯವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ ಎಂದು ತಿಳಿದು ಬಂದಿದೆ.