ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷವು ಮಂಗಳವಾರ (ಅ.1) ಅಭ್ಯರ್ಥಿ ಅಂತಿಮಗೊಳಿಸಿದೆ.
ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾಗಿ ಆಯ್ಕೆಯಾದ ಕಾರಣದಿಂದ ತೆರವಾಗಿದ್ದ ವಿಧಾನ ಪರಿಷತ್ ಕ್ಷೇತ್ರದ ಸದಸ್ಯತ್ವಕ್ಕೆ ಚುನಾವಣೆ ನಡೆಯಲಿದ್ದು
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಬೊಟ್ಯಾಡಿ ಅವರನ್ನು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಅಭ್ಯರ್ಥಿಯಾಗಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಘೋಷಿಸಿದೆ.
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಕ್ಷೇತ್ರದ ಉಪಚುನಾವಣೆ,ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಬೊಟ್ಯಾಡಿ
